ತುಮಕೂರು: ಸದಸ್ಯತ್ವ ನೋಂದಣಿ ಹಾಗೂ ಮೇಕೆದಾಟು ಯೋಜನೆಯ ಪಾದಯಾತ್ರೆಯನ್ನು ಯಶಸ್ವಿಯಾಗೊಳಿಸುವ ಬಗ್ಗೆ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಕಾಂಗ್ರೆಸ್ ನಾಯಕ ಡಾ. ಜಿ.ಪರಮೇಶ್ವರ್ ರವರ ಅಧ್ಯಕ್ಷತೆಯಲ್ಲಿ ತುಮಕೂರು ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆ ಏರ್ಪಡಿಸಲಾಗಿತ್ತು.
ಸಭೆಯಲ್ಲಿ ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ, ಶಫಿ ಅಹಮದ್, ತಿಪಟೂರು ಕ್ಷೇತ್ರ ಮಾಜಿ ಶಾಸಕರು ನಮ್ಮ ನಾಯಕರಾದ ಕೆ.ಷಡಕ್ಷರಿ, ಲಕ್ಷ್ಮೀನಾರಾಯಣ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಬೆಮೆಲ್ ಕಾಂತರಾಜು, ಕೆಪಿಸಿಸಿ ವೀಕ್ಷಕರಾದ ಚೆಲುವರಾಜು, ರಾಕ್ ಮಂಜುನಾಥ್, ವೀಣಾ ಕಾಶಪ್ಪ, ಕೆಪಿಸಿಸಿ ಕಾರ್ಯದರ್ಶಿಗಳಾದ ದಿನೇಶ್ ಬಿ.ಎಸ್. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್ ರಾಮಕೃಷ್ಣ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಶಿ ಹುಲಿಕುಂಟೆ, ಹಿರಿಯ ಮುಖಂಡರಾದ ಚೌದ್ರಿ ರಂಗಪ್ಪ, ಪಾವಗಡ ವೆಂಕಟೇಶ್, ಸೋಮಶೇಖರ್, ಹೊನ್ನಗಿರಿಗೌಡ ಹಾಗೂ ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪ್ರಮುಖ ಮುಖಂಡರುಗಳು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy