ಕಾರವಾರ: ಜಿಲ್ಲಾ ಪಂಚಾಯಿತಿ ನೌಕರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದ ಕಾಳಿ ನದಿ ಸೇತುವೆ ಬಳಿ ನಡೆದಿದೆ.
ಶ್ರೀಕಾಂತ ಮೇಲಿನಮನೆ (38) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಕಾರವಾರ ಜಿಲ್ಲಾ ಪಂಚಾಯಿತಿಯಲ್ಲಿ ಪ್ರಾಜೆಕ್ಟ್ ಆಫೀಸರ್ ಆಗಿದ್ದ ಶ್ರೀಕಾಂತ ಕಾಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಧಿಕ ಕೆಲಸದ ಒತ್ತಡ, ಮೇಲಾಧಿಕಾರಿಗಳ ಕಿರುಕುಳದಿಂದ ನನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಂದೆ ತಮ್ಮಣ್ಣ ಚನ್ನಬಸಪ್ಪ ಮೇಲಿನಮನೆ ಅವರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz