ಕೊರಟಗೆರೆ: ತಾಲೂಕಿನ ಕಸಬಾ ಹೋಬಳಿಯ ದೇವರಹಳ್ಳಿ ಹೊಸಕೆರೆಗೆ ಮೀನು ಹಿಡಿಯಲು ಬಿಟ್ಟಿದ್ದ ಬಲೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಮೃತ ವ್ಯಕ್ತಿಯು ಕಸಬಾ ಹೋಬಳಿಯ ಹುಲಿಕುಂಟೆ ಗ್ರಾಮದ ರಾಮಣ್ಣ (62) ಎಂಬ ವ್ಯಕ್ತಿ ಮೃತ ಪಟ್ಟಿರುವುದು ದೃಢವಾಗಿದೆ.
ಕೆಲವು ವರ್ಷಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ಎನ್ನಲಾಗಿದೆ. ಕಳೆದ ಎರಡು ದಿನಗಳಿಂದ ದೇವರಹಳ್ಳಿ ಕೆರೆಯ ಅಕ್ಕ–ಪಕ್ಕದಲ್ಲಿ ರಾಮಣ್ಣ ಓಡಾಡುತ್ತಿದ್ದು, ಸ್ಥಳೀಯರು ಗಮನಿಸಿ ಹುಲಿಕುಂಟೆ ಗ್ರಾಮಕ್ಕೆ ಕರೆದು ತಂದು ಬಿಟ್ಟಿದ್ದಾರೆ.
ಗುರುವಾರ ಸಂಜೆ ನಮ್ಮ ತಂದೆ ಕೆರೆಯ ಸಮೀಪ ಬಂದಿದ್ದಾರೆ. ರಾತ್ರಿ ಆದಕಾರಣ ಕಣ್ಣು ಕಾಣಿಸದೇ ಕಾಲು ಜಾರಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಮಗ ರಂಜನ್ ತಿಳಿಸಿದ್ದಾರೆ. ಗುರುವಾರ ಬೆಳಗ್ಗೆ ಮೀನು ಹಿಡಿಯಲು ಬಿಟ್ಟಿದ್ದ ಬಲೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ತಕ್ಷಣ ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣಾ ಅಧಿಕಾರಿಗಳು ಹಾಗೂ ಅಗ್ನಿಶಾಮಕ ತಂಡ ಆಗಮಿಸಿ ಮೃತದೇಹ ಹೊರ ತೆಗೆದಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC