ಬೆಳಗಾವಿ: ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡಲಾಗುವುದು ಎಂದು ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ ಮಾಡಿದ ಮತ್ತು ಶಿವಾಜಿ ಪ್ರತಿಮೆ ಮಸಿ ಬಳಿದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿಯೊಂದಿಗೆ ಮಾತನಾಡುತ್ತೇನೆ ಎಂದು ಅವರು ಹೇಳಿದರು.
ಇನ್ನೂ ಕಾನೂನಿನಲ್ಲಿ ಅವಕಾಶವಿದ್ದರೆ, ಎಂಇಎಸ್ ಸಂಘಟನೆಯನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಲಾಗುವುದು. ಇದಕ್ಕೆ ಎಲ್ಲ ರೀತಿಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಬೊಮ್ಮಾಯಿ ಘೋಷಿಸಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700