ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ ಪ್ರತಿವರ್ಷ ರಾಜ್ಯೋತ್ಸವ ವದಂದು ವಿರೋಧದ ನಡುವೆಯೂ ಕರಾಳ ದಿನಾಚರಣೆ ಆಚರಿಸುತ್ತ ಬರುತ್ತಿದೆ. ಅದರಂತೆ ಈ ವರ್ಷವೂ ನವೆಂಬರ್ 1 ರಂದು ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಲು ಎಂಇಎಸ್ ಸಿದ್ಧತೆ ನಡೆಸುತ್ತಿದೆ.
ಈ ಕರಾಳ ದಿನಾಚರಣೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬೆಂಬಲ ವ್ಯಕ್ತಪಡಿಸುವ ಮೂಲಕ ಗಡಿ ವಿವಾದದ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಹೌದು ನವೆಂಬರ್ 1ರಂದು ಎಂಇಎಸ್ ನ ಕರಾಳ ದಿನಾಚರಣೆಗೆ ಮಹಾರಾಷ್ಟ್ರದ ಪ್ರತಿನಿಧಿ ಕಳಿಸುವುದಾಗಿ ಸಿಎಂ ಶಿಂಧೆ ಹೇಳಿದ್ದಾರೆ.


