ತಿಪಟೂರು: ರಾಜ್ಯದ ನಾಡ ಧ್ವಜವಾದ ಕನ್ನಡ ಬಾವುಟವನ್ನು ಸುಟ್ಟು ಹಾಕಿರುವುದು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿರುವುದು ಮತ್ತು ಜಗಜ್ಯೋತಿ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಸಗಣಿ ಎರಚಿರುವುದನ್ನು ಖಂಡಿಸಿ, ತಾಲ್ಲೂಕು ಜಯ ಕರ್ನಾಟಕ ಕರ್ನಾಟಕ ಜನಪರ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ಕೃತ್ಯ ನಡೆಸಿದವರನ್ನು ತಕ್ಷಣವೇ ಗಡಿಪಾರು ಮಾಡಬೇಕು. ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆಯವರು ಪದೇ ಪದೇ ನಾಡದ್ರೋಹಿ ಕೆಲಸಗಳನ್ನು ಮಾಡುತ್ತಿದ್ದು, ಈ ಸಂಘಟನೆಯನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ನಿಷೇಧ ಮಾಡುವಂತೆ ಹಾಗೂ ಎಂಇಎಸ್ ಸಂಘಟನೆಯ ಮುಖಂಡರ ಆಸ್ತಿಗಳನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕುವಂತೆ ಒತ್ತಾಯಿಸಿ ಉಪ ವಿಭಾಗಾಧಿಕಾರಿಗಳ ಕಚೇರಿಯ ತಹಸೀಲ್ದಾರ್ ಕೆ.ಎಲ್.ಪರಮೇಶ್ವರಯ್ಯ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಸಂಘಟನೆಯ ತಾಲೂಕು ಅಧ್ಯಕ್ಷ ಬಿ.ಟಿ.ಕುಮಾರ್, ನಗರಸಭಾ ಸದಸ್ಯೆ ಡಾ.ಓಹೀಲಾ ಗಂಗಾಧರ್, ಪ್ರಧಾನ ಕಾರ್ಯದರ್ಶಿ ಸಾರ್ಥವಳ್ಳಿ ಶಿವಕುಮಾರ್ ಮಾತನಾಡಿದರು. ಮಾಜಿ ನಗರಸಭಾ ಸದಸ್ಯ ತರಕಾರಿ ಗಂಗಾಧರ್, ಸಂಘಟನೆಯ ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಬಿ.ಬಿ.ಬಸವರಾಜ್, ನಗರ ಗೌರವಾಧ್ಯಕ್ಷ ಡಾ.ಭಾಸ್ಕರ್, ಕಾರ್ಯದರ್ಶಿ ಲೋಕೇಶ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಖಲಂದರ್, ಉಪಾಧ್ಯಕ್ಷ ಪ್ರಶಾಂತ್, ಕಾರ್ಯದರ್ಶಿ ಯಶ್ವಂತ್, ಸಂಚಾಲಕ ಹೇಮಂತ್, ಸಂಘಟನೆಯ ರವಿ ಹಿಂಡಿಸ್ಕೆರೆ, ಉಮಾಶಂಕರ್, ಲೋಕನಾಥ್ ಸಿಂಗ್, ಮಂಜುನಾಥ್, ರಂಜಿತ್, ಶಂಕರ್, ದೀಕ್ಷಿತ್ ಪ್ರಸಾದ್ ಮತ್ತು ಸೇರಿದಂತೆ ತರಕಾರಿ ಗಂಗಾಧರ್ ಸ್ನೇಹ ವೃಂದದ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.