ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣ ಖಂಡಿಸಿ ನಾಡದ್ರೋಹಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದು, ನಿಷೇಧಾಜ್ಞೆ ನಡುವೆಯೂ ಆನಗೋಳ ಚಲೋ ಹೋರಾಟ ಮುಂದುವರಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪೀರನವಾಡಿ ತಲುಪಿದ್ದು, ಎಂಇಎಸ್ ಹಾಗೂ ಶಿವಸೇನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕನ್ನಡಿಗ ಹೋರಾಟಗಾರರು, ಎಂಇಎಸ್ ಪುಂಡರನ್ನು ಬಂಧಿಸುವಂತೆ ಒತ್ತಾಯಿಸಿದರು. ಪ್ರತಿಭಟನಾ ನಿರತ ಕರವೇ ಕಾರ್ಯಕರ್ತರನ್ನು ಪೀರನವಾಡಿ ಬಳಿ ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕರವೇ ಕಾರ್ಯಕರ್ತರ ನಡುವೆ ವಾಗ್ವಾದ-ಘರ್ಷಣೆ ನಡೆದಿದೆ.
ಇನ್ನೂ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕನ್ನಡಿಗರು, ಎಂಇಎಸ್ ಪುಂಡರನ್ನು ಬಂಧಿಸಿ ಕ್ರಮ ಕೈಗೊಳ್ಳುವ ಬದಲು ಕನ್ನಡ ಪರ ಹೋರಾಟಗಾರರನ್ನು ಬಂಧಿಸಿ ದಬ್ಬಾಳಿಕೆ ನಡೆಸುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700