ಗುಬ್ಬಿ: ವಾಲ್ಮೀಕಿ ಜನಾಂಗದ ಮೀಸಲಾತಿಗಾಗಿ ಮಹಾಸ್ವಾಮಿಗಳು ಹೋರಾಡುತ್ತಿದ್ದು, ಇಂದಿಗೆ 231 ದಿನಗಳ ಕಳೆದರೂ ಈವರೆಗೆ ಸರ್ಕಾರ ಮೀಸಲಾತಿ ಹೆಚ್ಚಿಸದೇ ನಿರ್ಲಕ್ಷ್ಯ ಧೋರಣೆ ತಳೆದಿದೆ ಎಂದು ವಾಲ್ಮೀಕಿ ಸಮುದಾಯದ ಮುಖಂಡರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಎಸ್ ಸಿ, ಎಸ್ ಟಿ ಸಮುದಾಯಗಳು ಮತ್ತು ತಳ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿ, ಗುಬ್ಬಿ ಪಟ್ಟಣದ ತಾಲೂಕು ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿದ ಮುಖಂಡರು, ಸರ್ಕಾರದ ನಿರ್ಲಕ್ಷ್ಯದ ಧೋರಣೆಯನ್ನು ಖಂಡಿಸಿದರು.
ಸ್ವಾಮೀಜಿಗಳು ಆಹೋ ರಾತ್ರಿ ಧರಣಿ ಮಾಡುತ್ತಿದ್ದರೂ, ಸರ್ಕಾರ ಸೌಜನ್ಯಕ್ಕಾದರೂ ಅವರನ್ನು ಭೇಟಿ ಮಾಡುವ ಕೆಲಸ ಮಾಡಿಲ್ಲ ಎಂದು ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವರದಿ: ಮಂಜುನಾಥ್ ಗುಬ್ಬಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


