ಪಾವಗಡ: ರಾಜನಹಳ್ಳಿ ವಾಲ್ಮೀಕಿ ಶ್ರೀಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮೀಸಲಾತಿಗಾಗಿ 130 ದಿನಗಳಿಂದ ನಿರಂತರ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ಅವರನ್ನು ಬೆಂಬಲಿಸಿ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿಗೊಳಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸಲು ಸಿಎಂಗೆ ಮನವಿ ಮಾಡಿದ್ದು, ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿದ್ದರೆ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಸಂಘ-ಸಂಸ್ಥೆಗಳ ಮುಖಂಡರಾದ ಡಿ.ಜೆ .ಎಸ್. ನಾರಾಯಣಪ್ಪ, ಚಲವಾದಿ ಮುಖಂಡ ಕನುಮಪ್ಪ, ಡಿ.ಎಸ್.ಎಸ್. ಜಿಲ್ಲಾ ಸಂಚಾಲಕ ಸಿ. ಕೆ. ತಿಪ್ಪೇಸ್ವಾಮಿ, ತಾಲೂಕು ಸಂಚಾಲಕ ಪೆದ್ದನ್ನ, ಗುರುಮೂರ್ತಿ ಬಣದ ಡಿ.ಎಸ್.ಎಸ್. ಸಂಚಾಲಕ ನರಸಿಂಹಪ್ಪ, ಬಿ.ಎಸ್.ಪಿ.ಅಧ್ಯಕ್ಷ ಹನುಮಂತರಾಯಪ್ಪ, ಪ್ರಧಾನ ಕಾರ್ಯದರ್ಶಿ ವೆಂಕಟರಮಣ, ನಲಿಗಾನಹಳ್ಳಿ ಮಂಜುನಾಥ್, ಲಂಬಾಣಿ ಸಮುದಾಯದ ಗೋವಿಂದ ನಾಯ್ಕ, ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಅಂಜನ್ ನಾಯಕ, ವಕೀಲರಾದ ಕೃಷ್ಣ, ರವೀಂದ್ರ, ಕರವೇ ಲಕ್ಷ್ಮೀನಾರಾಯಣ, ಬೇಕರಿ ನಾಗರಾಜ್ , ಓಂಕಾರ ನಾಯಕ, ಕನ್ನಮೇಡಿ ಸುರೇಶ್, ಮೀನುಗುಟಂನಹಳ್ಳಿ ಶಿವಪ್ಪ, ಶೈಲಾಪುರ, ಮಂಜುನಾಥ್, ಗುಜ್ಜನಡು ವೆಂಕಟೇಶ್, ಆಟೋ ಸತ್ತ ಮುಂತಾದವರು ಭಾಗವಹಿಸಿದ್ದರು.
ವರದಿ: ರಾಮಪ್ಪ ಸಿ.ಕೆ.ಪುರ ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB