ಆನ್‌ಲೈನ್ ಮೂಲಕ ಮತ್ತೊಂದು ರೀತಿಯ ವಂಚನೆ ಇದೀಗ ಬೆಳಕಿಗೆ ಬಂದಿದ್ದು ವ್ಯಕ್ತಿಗೆ ವಿದ್ಯುತ್ ಬಿಲ್ ಪಾವತಿಸುವಂತೆ ಮೆಸೇಜ್ ಕಳುಹಿಸಿ 5.48 ಲಕ್ಷ ರೂ. ವಂಚನೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಣ್ಣನ್ (52) ಹಣ ಕಳೆದುಕೊಂಡವರು.
ಮೈಸೂರು ಯಾದವಗಿರಿ ಬಡಾವಣೆಯ ನಿವಾಸಿಯಾಗಿರುವ ಕಣ್ಣನ್ ಅವರಿಗೆ ವಿದ್ಯುತ್ ಬಿಲ್ ಬಾಕಿ ಇದೆ ಪಾವತಿಸುವಂತೆ ದೂರವಾಣಿ ಕರೆ ಬಂದಿದೆ. ವಂಚಕರು ನಂತರ ಲಿಂಕ್ ಕಳುಹಿಸಿ ಹಣ ಪಾವತಿಸುವಂತೆ ಸೂಚನೆ ನೀಡಿದ್ದಾರೆ.
ಲಿಂಕ್ ಮೂಲಕ ಸಂಪೂರ್ಣ ಮಾಹಿತಿ ಪಡೆದು ಕಣ್ಣನ್ ಅವರ ಖಾತೆಯಲ್ಲಿದ್ದ 5,48,149 ರೂಪಾಯಿಯನ್ನ ವಂಚಕರು ವರ್ಗಾವಣೆ ಮಾಡಿಕೊಂಡಿದ್ದಾರೆ. ಈ ಕುರಿತು ಮೈಸೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


