ಬೆಳಗಾವಿ: ಮೈಕ್ರೋ ಫೈನಾನ್ಸ್ ಸಾಲಬಾಧೆಯಿಂದ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಖಾನಾಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದ ಜನತಾ ಕಾಲೋನಿ ನಿವಾಸಿ ಗೋವಿಂದ ಗಣಪತಿ ವಡ್ಡರ (34) ಎಂದು ಗುರುತಿಸಲಾಗಿದೆ.
ಮನೆಯಲ್ಲಿಯೇ ಗುರುವಾರ ರಾತ್ರಿ ವಿಷ ಕುಡಿದಿದ್ದ ಗೋವಿಂದ ಅವರು ಶುಕ್ರವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.
ಸೆಂಟ್ರಿಂಗ್ ಕೆಲಸದ ಸಾಮಾಗ್ರಿಗಳ ಖರೀದಿಗೆ ಫೈನಾನ್ಸ್ ನಿಂದ ರೂ. 60 ಸಾವಿರ ಹಾಗೂ ಕುಟುಂಬದವರ ಹೆಸರಿನಲ್ಲಿ ಗ್ರಾಮಾಭಿವೃದ್ದಿ ಸಂಘದಿಂದ ರೂ. 1 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4