ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಕಪ್ಪು ಹಣವನ್ನು ಬಿಳಿ ಹಣವಾಗಿ ಪರಿವರ್ತಿಸುವ ಸಾಧನಗಳಾಗಿ ಮಾರ್ಪಟ್ಟಿದ್ದು, ಇದಕ್ಕೆ ಕಡಿವಾಣ ಹಾಕುವ ಅಗತ್ಯವಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.
ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಮೈಕ್ರೋ ಫೈನಾನ್ಸ್) ಮಸೂದೆಗೆ ವಿಧಾನಸಭೆಯಲ್ಲಿ ಸೋಮವಾರ ಅಂಗೀಕಾರ ದೊರೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿ ವಿಧೇಯಕದ ಕುರಿತು ಮಾತನಾಡಿದ ಎಚ್.ಕೆ. ಪಾಟೀಲ್ ಅವರು, ನೋಂದಾಯಿತವಲ್ಲದ ಲೇವಾದೇವಿದಾರರನ್ನು ನಿಯಂತ್ರಿಸುವುದು, ಮೂಲಭೂತ ಹಕ್ಕುಗಳ ರಕ್ಷಣೆಯನ್ನು ಖಚಿತಪಡಿಸುವುದು ಮೊದಲಾದ ಅಂಶಗಳನ್ನು ಒಳಗೊಂಡಿದೆ. ಕಾನೂನು ಬದ್ಧ ಲೇವಾದೇವಿಯನ್ನು ನಿಷೇಧಿಸುವುದಿಲ್ಲ ಆದರೆ ಬಲವಂತವಾದ ಸಾಲ ವಸೂಲಾತಿಯನ್ನು ನಿರ್ಬಂಧಿಸಲಿದೆ ಎಂದು ತಿಳಿಸಿದರು.
ಅಧಿಕ ಬಡ್ಡಿ ವಿಧಿಸಿ ತೊಂದರೆ ಕೊಡುವುದರಿಂದ ಸಾಲಗಾರರು ಬೀದಿಗೆ ಬರುವಂತಹ ಮತ್ತು ಆತಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಗೆ ದೂಡುವುದನ್ನು ತಡೆಯಲು ಹಾಗೂ ತಪ್ಪಿತಸ್ಥರಿಗೆ 10 ವರ್ಷ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸಲು ಈ ವಿಧೇಯಕವನ್ನು ಮಂಡಿಸಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ವ್ಯವಹಾರದಲ್ಲಿ ಸುಮಾರು 40 ಸಾವಿರ ಕೋಟಿ ರೂ. ಚಲಾವಣೆಯಲ್ಲಿದೆ. ಇದು ಯಾರ ಹಣ? ಸರಕಾರದ ಅನುದಾನವಿಲ್ಲದೆ, ಆರ್ ಬಿಐ ಸಹಾಯ ಇಲ್ಲದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ವಹಿವಾಟು ನಡೆಯುತ್ತಿರುವುದರ ಅರ್ಥವೇನು? ಇದೆಲ್ಲವೂ ಕಪ್ಪು ಹಣ ಎಂಬುದರಲ್ಲಿ ಅನುಮಾನ ಬೇಡ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4