ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿರುವ ಹಿಂಗಾನಾ ಎಂಐಡಿಸಿ ಕಂಪನಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದಾಗ ಮೂವರು ಕಾರ್ಮಿಕರು ಸಜೀಹದಹನವಾಗಿದ್ದಾರೆ ಎಂದು ವರದಿಯಾಗಿದೆ.
ಇನ್ನೂ 10 ರಿಂದ 12 ಕಾರ್ಮಿಕರು ಒಳಗೆ ಸಿಲುಕಿರುವ ಆತಂಕ ಉಂಟಾಗಿದೆ.ಈ ಕಂಪನಿಯಲ್ಲಿ ಬೆಂಕಿಯಿಂದ ಮೂವರು ಕಾರ್ಮಿಕರ ದುರಾದೃಷ್ಟಕರ ಸಾವಿನ ಬಗ್ಗೆ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತುಂಬಾ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ವಿಷಯದ ಬಗ್ಗೆ ಮಾತನಾಡಲು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ನಾಗ್ಪುರದ ಜಿಲ್ಲಾಧಿಕಾರಿಗಳಿಗೆ ತಕ್ಷಣವೇ ಸೂಚಿಸಿದ್ದಾರೆ.
ಈ ಘಟನೆಯಲ್ಲಿ ಗಾಯಗೊಂಡವರಿಗೆ ತಕ್ಷಣ ಉತ್ತಮ ಚಿಕಿತ್ಸೆ ನೀಡಬೇಕು ಎಂದು ದೇವೇಂದ್ರ ಫಡ್ನವೀಸ್ ಸೂಚನೆ ನೀಡಿದ್ದಾರೆ.ಕೂಡಲೆ ತಹಶೀಲ್ದಾರ್ ಆ ಸ್ಥಳಕ್ಕೆ ಆಗಮಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


