ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಸೇನಾ ಕಾರ್ಯಾಚರಣೆಯಲ್ಲಿ ಇಬ್ಬರು ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಭಯೋತ್ಪಾದಕರೊಂದಿಗಿನ ಎನ್ ಕೌಂಟರ್ ನಲ್ಲಿ ಸೈನಿಕರು ಸಾವನ್ನಪ್ಪಿದ್ದಾರೆ.
ಕುಲ್ಗಾಮ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮೊದರ್ಗಾಂ ಗ್ರಾಮದಲ್ಲಿ ಸೇನೆ ತಪಾಸಣೆ ನಡೆಸುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಮೂವರು ಉಗ್ರರು ಅಡಗಿ ಕುಳಿತಿದ್ದಾರೆ ಎಂದು ವರದಿಯಾಗಿದೆ. ಶೋಧ ನಡೆಸಿದ ಜಂಟಿ ಪಡೆಗಳ ಸೇನಾ ಯೋಧ ವೀರ ಮರಣವನ್ನಪ್ಪಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಫ್ರಿಸಲ್ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಸೇನಾ ಯೋಧ ಹುತಾತ್ಮರಾಗಿದ್ದಾರೆ. ಇಲ್ಲಿ ನಾಲ್ವರು ಭಯೋತ್ಪಾದಕರನ್ನು ಸೇನೆ ಹತ್ಯೆ ಮಾಡಿದೆ.
ಈ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಗಾಗಿ ಶೋಧ ನಡೆಸುತ್ತಿದ್ದ ತಂಡದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಘಟನೆಗಳ ನಂತರ ಜಿಲ್ಲೆಯ ವಿವಿಧೆಡೆ ಶೋಧ ಕಾರ್ಯ ನಡೆಯುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA