ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಹೆಚ್ಚಳದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಫ್ರೀಡಂ ಪಾರ್ಕ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈತರು ಹಾಗೂ ಹಾಲು ಒಕ್ಕೂಟಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ತಮ್ಮನ್ನು ಭೇಟಿಯಾಗಿ, ಪ್ರತಿ ಲೀಟರ್ ಹಾಲಿನ ದರವನ್ನು 12 ರೂ.ಗಳಷ್ಟು ಹೆಚ್ಚಿಸುವಂತೆ ಮತ್ತು ಅದರಲ್ಲಿ 2 ರೂ.ಗಳನ್ನು ಸಂಘಗಳಿಗೆ ನೀಡುವಂತೆ ಮನವಿ ಮಾಡಿದ್ದಾರೆ ಎಂದು ಸಿಎಂ ತಿಳಿಸಿದರು.
ತೆಲಂಗಾಣ, ತಮಿಳುನಾಡು ಹಾಗೂ ಆಂಧ್ರಪ್ರದೇಶ ಸೇರಿದಂತೆ ನೆರೆಯ ರಾಜ್ಯಗಳಲ್ಲಿ ಹಾಲಿನ ದರ ಮತ್ತು ಅಲ್ಲಿನ ಪರಿಸ್ಥಿತಿಯ ಬಗ್ಗೆ ವರದಿಗಳನ್ನು ಪಡೆದು ಪರಿಶೀಲಿಸಿದ ನಂತರ ಮುಂದಿನ ಹೆಜ್ಜೆ ಇಡಲಾಗುವುದು ಎಂದರು.
ಹಾಲಿನ ಪ್ರಸ್ತುತ ದರದಿಂದ ಸಂಘಗಳಿಗೆ ನಷ್ಟವಾಗುತ್ತಿದೆ. ಬೆಲೆ ವಿಚಾರವಾಗಿ ರೈತರಲ್ಲಿ ಅಸಮಾಧಾನವಿದ್ದು, ಸುಮಾರು 50 ಸಾವಿರಕ್ಕೂ ಅಧಿಕ ಹಾಲು ಉತ್ಪಾದಕರು ಹಾಲಿನ ದರ ಏರಿಕೆಗೆ ಆಗ್ರಹಿಸುತ್ತಿದ್ದಾರೆ ಎಂದು ಅವರು ವಿವರಿಸಿದರು.
ರೈತರು ಹಾಗೂ ಒಕ್ಕೂಟಗಳನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಳ್ಳಲಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
