ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ವಾರಣಾಸಿಯ ಕಾಶಿ ವಿಶ್ವನಾಥನ ದರ್ಶನ ಪಡೆದಿದ್ದು, ಶಿವರಾತ್ರಿಗೂ ಮುನ್ನ ಶಿವನ ದರ್ಶನ ಪಡೆದು ನಟಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸಿನಿಮಾ ಶೂಟಿಂಗ್ ಗೆ ಬ್ರೇಕ್ ಹಾಕಿ ತಮನ್ನಾ ಟೆಂಪಲ್ ರನ್ ಮಾಡುತ್ತಿದ್ದು, ಜ್ಯೋತಿರ್ಲಿಂಗಕ್ಕೆ ನಟಿ ಪೂಜೆ ಸಲ್ಲಿಸಿದ್ದಾರೆ. ಸದ್ಯದಲ್ಲೇ ವಿಜಯ್ ವರ್ಮಾ ಜೊತೆ ತಮನ್ನಾ ಮದುವೆಯಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಶುಭಕಾರ್ಯಕ್ಕೆ ಚಾಲನೆ ನೀಡುವ ಮುನ್ನ ದೇವರ ಸನ್ನಿಧಿಗೆ ನಟಿ ಭೇಟಿ ನೀಡಿದ್ದಾರೆ.
ಕಾಶಿಗೆ ಭೇಟಿ ಕೊಟ್ಟಿರುವ ಫೋಟೋಗಳನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕಳೆದ 2 ವರ್ಷಗಳಿಂದ ಬಾಲಿವುಡ್ ನಟ ವಿಜಯ್ ವರ್ಮಾ ಜೊತೆ ತಮನ್ನಾ ಭಾಟಿಯಾ ಎಂಗೇಜ್ ಆಗಿದ್ದಾರೆ. ಇತ್ತೀಚಿನ ಸಂದರ್ಶನಗಳಲ್ಲಿ ಡೇಟಿಂಗ್ ಬಗ್ಗೆ ತಮನ್ನಾ ರಿವೀಲ್ ಮಾಡಿದ್ದರು. ಮದುವೆ ಪ್ಲ್ಯಾನಿಂಗ್ ಬಗ್ಗೆ ಇಬ್ಬರು ಮುಕ್ತವಾಗಿ ಸಂದರ್ಶನಗಳಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296