ತುಮಕೂರು: ಸರ್ಕಾರದ ಆದೇಶದಂತೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಈಗಾಗಲೇ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಜಿಲ್ಲೆಯ ರೈತರು ನೋಂದಾಯಿಸಿಕೊಳ್ಳಲು ಡಿಸೆಂಬರ್ 15 ಕಡೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಚಿಕ್ಕನಾಯಕನಹಳ್ಳಿ, ಹುಳಿಯಾರು, ಕುಣಿಗಲ್ (2 ಕೇಂದ್ರ), ತಿಪಟೂರು, ತುರುವೇಕೆರೆ, ತುಮಕೂರು ಬಟವಾಡಿ, ಗುಬ್ಬಿ, ಮಧುಗಿರಿ ಹಾಗೂ ಶಿರಾ ಎ.ಪಿ.ಎಂ.ಸಿ. ಗೋದಾಮಿನ ಜೊತೆಗೆ ಕೊರಟಗೆರೆ ಅಕ್ಕಿರಾಂಪುರ ಪಿ.ಡಿ.ಎಸ್. ಗೋದಾಮು ಸೇರಿದಂತೆ ಜಿಲ್ಲೆಯ 9 ತಾಲ್ಲೂಕುಗಳಲ್ಲಿ ಒಟ್ಟು 11 ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ರಾಗಿ ನೋಂದಣಿ/ ಖರೀದಿ ಕೇಂದ್ರಗಳಿಗೆ ರೈತರು ಭೇಟಿ ನೀಡಿ ಡಿಸೆಂಬರ್ 15ರೊಳಗಾಗಿ ನೋಂದಾಯಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


