ಹಾವೇರಿ: ಪಟಾಕಿ ಅಂಗಡಿಯಲ್ಲಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಪಟಾಕಿ ಸುಟ್ಟು ಕರಕಲಾಗಿರುವ ಘಟನೆ ಹಾವೇರಿಯಲ್ಲಿ ಮಂಗಳವಾರ ನಡೆದಿದೆ.
ಹಾವೇರಿಯ ಹೊರವಲಯದ ಸಾತೇನಹಳ್ಳಿ ಬಳಿ ಕುಮಾರ್ ಎಂಬುವವರಿಗೆ ಸೇರಿದ ಭೂಮಿಕಾ ಪಟಾಕಿ ಗೋದಾಮಿನಲ್ಲಿ ಈ ದುರಂತ ಸಂಭವಿಸಿದ್ದು, ಸುಮಾರು ಒಂದು ಕೋಟಿಗೂ ಹೆಚ್ಚು ಮೌಲ್ಯದ ಪಟಾಕಿ ದಾಸ್ತಾನು ಮಾಡಲಾಗಿತ್ತು.
ಇದೀಗ ಏಕಾಏಕಿ ಅದಕ್ಕೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣ ವಸ್ತುಗಳು ಬೆಂಕಿಗಾಹುತಿಯಾಗಿದೆ. ಮೂಲಗಳ ಪ್ರಕಾರ ಇನ್ನು ಕೆಲವೇ ದಿನಗಳಲ್ಲಿ ಗಣೇಶ ಚತುರ್ಥಿ ಹಬ್ಬ ಬರುತ್ತಿದ್ದು, ಈ ಸಂದರ್ಭದಲ್ಲಿ ಪಟಾಕಿ ಮಾರಾಟ ಮಾಡಲು ಪಟಾಕಿಗಳನ್ನು ಶೇಖರಿಸಿಡಲಾಗಿತ್ತು ಎಂದು ತಿಳಿದು ಬಂದಿದೆ.


