ಬ್ರೆಜಿಲ್: 10 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಅಂಗಡಿಗೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಬ್ರೆಜಿಲ್ನ ಪ್ರವಾಸಿ ನಗರವಾದ ಗ್ರಾಮಡೊದಲ್ಲಿ ನಡೆದಿದೆ.
ಘಟನೆಯಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 10 ಮಂದಿಯೂ ಸಾವನ್ನಪ್ಪಿದ್ದಾರೆ. ವಿಮಾನ ಪತನಗೊಂಡ ಪರಿಣಾಮ ಬೆಂಕಿ ಹತ್ತಿಕೊಂಡಿದ್ದು, ಈ ಬೆಂಕಿಯಿಂದ ಅನೇಕರು ಗಾಯಗೊಂಡಿದ್ದಾರೆ.
ನಿಯಂತ್ರಣ ಕಳೆದುಕೊಂಡ ವಿಮಾನ ಹಲವು ಕಟ್ಟಡಗಳಿಗೆ ತಾಗಿಕೊಂಡು ಬಂದು ಅಂಗಡಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಒಟ್ಟು 12 ಜನರು ಗಾಯಗೊಂಡಿದ್ದಾರೆ. ಬೆಂಕಿ ಹಾಗೂ ಹೊಗೆಯಿಂದಾಗಿ ಈ ಪ್ರದೇಶದಲ್ಲಿ ವಾಸಿಸುತ್ತಿದ್ದ ಜನರು ಉಸಿರಾಟದ ಸಮಸ್ಯೆ ಎದುರಿಸಬೇಕಾಯಿತು.
ವಿಮಾನವು ಸ್ಥಳೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತ ಸಂಭವಿಸಿದೆ ಎಂದು ರಾಷ್ಟ್ರೀಯ ಸಿವಿಲ್ ಡಿಫೆನ್ಸ್ ಹೇಳಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx