ಅಮರಾವತಿ: ಗೋಡಂಬಿ ಸಾಗಿಸುತ್ತಿದ್ದ ಮಿನಿ ಟ್ರಕ್ ವೊಂದು ಅಪಘಾತಕ್ಕೀಡಾದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.
ಅಪಘಾತದ ಸಂದರ್ಭದಲ್ಲಿ ಗೋಡಂಬಿ ಚೀಲಗಳ ಅಡಿಯಲ್ಲಿ ಸಿಲುಕಿಕೊಂಡ ಏಳು ಮಂದಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಒಬ್ಬರು ಬದುಕುಳಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನರಸಿಂಹ ಕಿಶೋರ್ ಹೇಳಿದ್ದಾರೆ.
ಸ್ಥಳೀಯರು ಮತ್ತು ಪೊಲೀಸರು ಗೋಣಿಚೀಲದ ಅಡಿಯಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಕೊವ್ವೂರು ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ ಎಂದು ಕಿಶೋರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q