nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?

    May 21, 2026

    ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ

    May 21, 2026

    ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು

    May 21, 2026
    Facebook Twitter Instagram
    ಟ್ರೆಂಡಿಂಗ್
    • ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
    • ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
    • ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
    • ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
    • ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ
    • ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ
    • ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
    • ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿನ ವಸಂತನರಸಾಪುರದ ಬಳಿ ಇಂಟಿಗ್ರೇಟೆಡ್ ಟೌನ್ಶಿಪ್ ನಿರ್ಮಾಣಕ್ಕೆ ಸಚಿವ ಬೈರತಿ ಸುರೇಶ್  ಸೂಚನೆ
    ತುಮಕೂರು June 12, 2024

    ತುಮಕೂರಿನ ವಸಂತನರಸಾಪುರದ ಬಳಿ ಇಂಟಿಗ್ರೇಟೆಡ್ ಟೌನ್ಶಿಪ್ ನಿರ್ಮಾಣಕ್ಕೆ ಸಚಿವ ಬೈರತಿ ಸುರೇಶ್  ಸೂಚನೆ

    By adminJune 12, 2024No Comments2 Mins Read
    bairati suresh

    ಬೆಂಗಳೂರು:  ತುಮಕೂರು ಜಿಲ್ಲೆಯ ವಸಂತನರಸಾಪುರದ ಕೈಗಾರಿಕ ಪ್ರದೇಶಕ್ಕೆ ಹೊಂದಿಕೊಂಡಂತೆ  ನಗರಾಭಿವೃದ್ಧಿ ಇಲಾಖೆಯ ವತಿಯಿಂದ Integrated Township ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಿ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ  ಬಿ.ಎಸ್.ಸುರೇಶ (ಬೈರತಿ) ರವರು ನಗರಾಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

    ವಿಧಾನಸೌಧದ ತಮ್ಮ ಕಚೇರಿಯಲ್ಲಿ ನಗರಾಭಿವೃದ್ದಿ ಇಲಾಖೆಯ ಅಡಿಯಲ್ಲಿ ಬರುವ ಹತ್ತು ಮಹಾನಗರ ಪಾಲಿಕೆಗಳು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ, ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಳೆದ 3 ತಿಂಗಳಿನಿಂದ ಇವುಗಳಲ್ಲಿ ನಡೆದಿರುವ ಕಾಮಗಾರಿಗಳು ಹಾಗೂ ಕೈಗೊಂಡಿರುವ ಯೋಜನೆಗಳ ಕುರಿತಂತೆ ಸಭೆ ನಡೆಸಿದರು.


    Provided by
    Provided by

    ಮುಖ್ಯಮಂತ್ರಿ  ಸಿದ್ದರಾಮಯ್ಯನವರು ಈಗಾಗಲೇ ಮಂಡಿಸಿರುವ ಆಯವ್ಯಯದಲ್ಲಿ ವಸಂತನರಸಾಪುರದ ಬಳಿ ಸುಮಾರು 500 ಎಕರೆ ಪ್ರದೇಶದಲ್ಲಿ Integrated Township ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ಲೋಕಸಭಾ ಚುನಾವಣೆಗಳಿಂದಾಗಿ ಇಲ್ಲಿಯವರೆಗೂ ನೀತಿ ಸಂಹಿತೆ ಜಾರಿಯಲ್ಲಿತ್ತು, ಈಗ ಅದು ಮುಕ್ತಾಯವಾಗಿರುವುದರಿಂದ Township ನಿರ್ಮಾಣದ ಬಗ್ಗೆ ಗಮನ ಹರಿಸುವಂತೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳಿಗೆ ಸಚಿವರಾದ ಬೈರತಿ ಸುರೇಶ ರವರು ಸೂಚಿಸಿದರು.

    ಹಾಸನ, ಚಿಕ್ಕಮಗಳೂರು, ಬೆಳಗಾವಿ ಮತ್ತು ಕೋಲಾರ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ರಸ್ತೆಗೆ ಡಾಂಬರೀಕರಣ, ರಸ್ತೆ ನಿರ್ಮಾಣ ಹಾಗೂ ರಿಂಗ್ ರಸ್ತೆ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೇಳಿದರು. ಅಲ್ಲದೆ ಮೈಸೂರು ರಿಂಗ್ ರಸ್ತೆ ನಿರ್ಮಾಣ ಮಾಡಲು ಕೆಲ ಅಡೆತಡೆಗಳು ಎದುರಾಗಿದ್ದು, ಮತ್ತೆ Short time Re–tender ಕರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇರುವಂತೆಯೇ ಇತರೆ ಮಹಾನಗರ ಪಾಲಿಕೆಗಳಲ್ಲಿಯೂ Corporation ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದ್ದು, ಎಲ್ಲೆಲ್ಲಿ ತೆರೆಯಲು ಸಾಧ್ಯವಿದೇ ಎನ್ನುವುದನ್ನು ಪರಿಶೀಲಿಸಿ. ಅಲ್ಲದೇ, ಸ್ಮಾರ್ಟ್ ಸಿಟಿ ಯೋಜನೆಯಡಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ Corporation ಶಾಲೆಗಳನ್ನು ತೆರೆಯಲು ಸಾಧ್ಯವೇ ಎನ್ನುವುದನ್ನು ಪರಿಶೀಲಿಸಿ ತಿಳಿಸುವಂತೆ ಸಚಿವರಾದ ಬೈರತಿ ಸುರೇಶ ರವರು ಅಧಿಕಾರಿಗಳಿಗೆ ತಿಳಿಸಿದರು.

    ಮಹಾನಗರ ಪಾಲಿಕೆಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಒಂದು ವೇಳೆ ಹೆಚ್ಚು ಇದ್ದರೆ, ಕಡಿಮೆ ಮಾನವ ಸಂಪನ್ಮೂಲ ಇರುವ ಜಾಗಕ್ಕೆ ನಿಯೋಜನೆ ಮಾಡಲು ಸಾಧ್ಯವೇ ಎನ್ನುವುದನ್ನು ತಿಳಿಸಲು ಸಚಿವರು ಕಾರ್ಯದರ್ಶಿಗಳಿಗೆ ಸೂಚಿಸಿದರು.

    ಸಹಾಯಕ ಅಭಿಯಂತರರು, ಕಿರಿಯ ಅಭಿಯಂತರರು ಸೇರಿದಂತೆ ತಾಂತ್ರಿಕ ಸಿಬ್ಬಂದಿಗಳನ್ನು ಎರವಲು ಸೇವೆ ಅಥವಾ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡು ಬಾಕಿ ಉಳಿದಿರುವ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಸಚಿವರು ಸಭೆಯಲ್ಲಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ಅಮೃತ್ 2.0 ಯೋಜನೆಯಡಿಯಲ್ಲಿ ರಾಜ್ಯದ ನಗರ ಪ್ರದೇಶಗಳಲ್ಲಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳಿಗೆ ತಗಲುವ ಹಣದ ವೆಚ್ಚ ಕುರಿತಂತೆ ಕ್ರಿಯಾಯೋಜನೆ ರೂಪಿಸಲು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಸಚಿವರಾದ ಬೈರತಿ ಸುರೇಶ ರವರು ಸೂಚಿಸಿದರು.

    ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪ ಚೋಳನ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಶರತ್ ಬಿ, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಿ. ಲಕ್ಷ್ಮೀಕಾಂತ ರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತರಾದ ವೆಂಕಟಾಚಲಪತಿ, ನಗರ ಮತ್ತು ಗ್ರಾಮಾಂತರ ಯೋಜನೆ ನಿರ್ದೇಶಕರಾದ ತಿಪ್ಪೇಸ್ವಾಮಿ, ಪೌರಾಡಳಿತ ನಿರ್ದೇಶನಲಾಯದ ಜಂಟಿ ನಿರ್ದೇಶಕರಾದ ವಿಜಯ ಕುಮಾರ್, ಮುಖ್ಯ ಅಭಿಯಂತರ ಚಂದ್ರಪ್ಪ ಸೇರಿದಂತೆ ಕೆಲ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ

    May 21, 2026

    ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ

    May 21, 2026

    ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ

    May 21, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?

    May 21, 2026

    ಕೋಡಿಗೇನಹಳ್ಳಿ: ಅಖಿಲ ಭಾರತ ರಾಷ್ಟ್ರೀಯ ಔಷಧ ವ್ಯಾಪಾರಿಗಳ ಮುಷ್ಕರ ಪ್ರಯುಕ್ತ ನಾವು ಗ್ರಾಮದಲ್ಲಿ ವ್ಯಾಪಾರವಹಿವಾಟು ಬಂದ್ ಮಾಡಿದ್ದು ಎನ್‌ ಐಸಿಡಿಗೆ…

    ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ

    May 21, 2026

    ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು

    May 21, 2026

    ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ

    May 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.