ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ರವರು ಭಾನುವಾರ ತುಮಕೂರು ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಧ್ಯಾಹ್ನ ಉಪಹಾರ ಯೋಜನೆ ಪ್ರಧಾನ ಮಂತ್ರಿ ಪೋಷಣ್ ಅಭಿಯಾನ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ಹಾಗೂ ಚಿಕ್ಕಿ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮೊಟ್ಟೆ, ಬಾಳೆ ಹಣ್ಣು ಹಾಗೂ ಚಿಕ್ಕಿ ವಿತರಣೆ ಮಾಡುವ ಮೂಲಕ ಅಭಿಯಾಕ್ಕೆ ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಶಾಸಕರಾದ ಜ್ಯೋತಿ ಗಣೇಶ್, ಹೆಚ್.ವಿ.ವೆಂಕಟೇಶ್ ಮತ್ತು ಸುರೇಶ್ ಗೌಡ , ಮಹಾಪೌರರಾದ ಪ್ರಭಾವತಿ, ಜಿಲ್ಲಾಧಿಕಾರಿಗಳಾದ ಶ್ರೀನಿವಾಸ್, ಜಿ.ಪಂ.ಕಾರ್ಯನಿರ್ವಹಕಾಧಿಕಾರಿಗಳಾದ ಪ್ರಭು ಸೇರಿದಂತೆ ಹಲವು ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.