nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಗರಾಭಿವೃದ್ಧಿಗಾಗಿ 200 ಕೋಟಿ ರೂ.ಗಳ ಅನುದಾನ: ಮಾದರಿ ನಗರ ನಿರ್ಮಾಣಕ್ಕೆ ಸಚಿವ ಜಿ.ಪರಮೇಶ್ವರ ಸೂಚನೆ
    ತುಮಕೂರು December 29, 2024

    ನಗರಾಭಿವೃದ್ಧಿಗಾಗಿ 200 ಕೋಟಿ ರೂ.ಗಳ ಅನುದಾನ: ಮಾದರಿ ನಗರ ನಿರ್ಮಾಣಕ್ಕೆ ಸಚಿವ ಜಿ.ಪರಮೇಶ್ವರ ಸೂಚನೆ

    By adminDecember 29, 2024No Comments2 Mins Read
    parameshwar

    ತುಮಕೂರು: ನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿ, ರಸ್ತೆ ಬದಿ ಚರಂಡಿ ನಿರ್ಮಾಣ, ಮೇಲ್ಸೇತುವೆ ಮತ್ತು ಕೆಳ ಸೇತುವೆಗಳ ನಿರ್ಮಾಣ, ಪಾದಚಾರಿ ಮಾರ್ಗ, ನಗರದ ಒಳ ಮತ್ತು ಹೊರ ವರ್ತುಲ ರಸ್ತೆ, ಪ್ರಮುಖ ವೃತ್ತಗಳು, ಉದ್ಯಾನವನಗಳ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರದಿಂದ 200 ಕೋಟಿ ರೂ.ಗಳ ಅನುದಾನ ಬಿಡುಗಡೆಯಾಗಿದ್ದು, ಅನುದಾನವನ್ನು ಸದ್ಬಳಕೆ ಮಾಡಿಕೊಂಡು ತುಮಕೂರು ನಗರವನ್ನು ಮಾದರಿ ನಗರವನ್ನಾಗಿ ನಿರ್ಮಿಸಬೇಕೆಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, 2024–25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿದಂತೆ ಸರ್ಕಾರದಿಂದ ತುಮಕೂರು ಸೇರಿ ರಾಜ್ಯದ 10 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಮಗ್ರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ತಲಾ 200 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಬಿಡುಗಡೆಯಾಗುವ ಹಣವನ್ನು ಕಾಮಗಾರಿಗಳಿಗೆ ಸದ್ವಿನಿಯೋಗಿಸಿ 2026–27ನೇ ಸಾಲಿನೊಳಗಾಗಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು.


    Provided by
    Provided by

    ಯೋಜನೆಯಡಿ ಒದಗಿಸಲಾಗುವ 200 ಕೋಟಿ ರೂ.ಗಳ ಅನುದಾನದಲ್ಲಿ ಪರಿಶಿಷ್ಟ ಜಾತಿ/ ಗಿರಿಜನ ಉಪಯೋಜನೆಗಳಿಗೆ 24.10ರಷ್ಟು ಮೊತ್ತವನ್ನು ಮೀಸಲಿಡಬೇಕು ಎಂದು ತಿಳಿಸಿದರಲ್ಲದೆ,  ಕಾಮಗಾರಿಗಳಿಗೆ ತಗಲುವ ಅಂದಾಜು ವೆಚ್ಚದ ಕ್ರಿಯಾಯೋಜನೆ ತಯಾರಿಸಬೇಕು. ಕ್ರಿಯಾಯೋಜನೆ ತಯಾರಿಸುವಾಗ ಯೋಜನೆಯ ಮಾರ್ಗಸೂಚಿಗಳನ್ನು ಅನುಸರಿಸಬೇಕೆಂದು ನಿರ್ದೇಶಿಸಿದರು.

    ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳೊಂದಿಗೆ ಕೇಬಲಿಂಗ್ ಡಕ್ಟ್ಸ್, ಇವಿ ಚಾರ್ಜಿಂಗ್ ಸ್ಟೇಷನ್ಸ್, ಸ್ಮಾರ್ಟ್ ಸ್ಟ್ರೀಟ್ ಲೈಟ್ಸ್, ಗಾರ್ಬೇಜ್ ಕಲೆಕ್ಷನ್, ವೈ–ಫೈ ಪೆಸಿಲಿಟೀಸ್, ಸುಲಭ್ ಶೌಚಾಲಯ್, ಟ್ರಾಫಿಕ್ ವಯೋಲೇಷನ್ ಡಿಟೆಕ್ಷನ್, ಬಿಲ್‌ಬೋರ್ಡ್ ಪ್ರಾವಿಷನ್, ಮೀನು ಮಾರುಕಟ್ಟೆ, ನಂದಿನಿ ಬೂತ್, ಹಾಪ್‌ಕಾಮ್ಸ್, ಮಕ್ಕಳ ಆಟದ ಮೈದಾನ, ಲಾಲ್‌ಬಾಗ್ ಮಾದರಿ ಉದ್ಯಾನವನ ಸೇರಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

    ನಗರದ ಖಾಸಗಿ ಬಸ್‌ನಿಲ್ದಾಣ ಪುನರಾಭಿವೃದ್ಧಿ, ಲಿಂಗಾಪುರದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಕಸಾಯಿ ಖಾನೆ, 2 ಕೋಟಿ ರೂ. ವೆಚ್ಚದಲ್ಲಿ ಮಾಂಸ ಮಾರಾಟ ವಲಯಗಳ ನಿರ್ಮಾಣ, 5 ಕೋಟಿ ರೂ. ವೆಚ್ಚದಲ್ಲಿ ಪಾಲಿಕೆ ಆವರಣದಲ್ಲಿ ಬಹು ಹಂತದ ವಾಹನ ನಿಲುಗಡೆ ವ್ಯವಸ್ಥೆ, ಅಕ್ಕ–ತಂಗಿ ಕೆರೆ ಬಳಿ ಉದ್ಯಾನವನ ಅಭಿವೃದ್ಧಿ, ಅಮಾನಿಕೆರೆ ಬಳಿ ತಾರಾಲಯ ನಿರ್ಮಾಣ ಹಾಗೂ ಯುವಿ/ಮೆಂಬ್ರೇನ್ ನೀರು ಶುದ್ಧೀಕರಣ ಘಟಕ, ಮರಳೂರು ಕೆರೆಯಲ್ಲಿ ನೀರು ಸಂರಕ್ಷಣಾ ಘಟಕ ನಿರ್ಮಾಣ, ಅಭಿವೃದ್ಧಿಯಾಗದ ಉದ್ಯಾನವನಗಳ ಅಭಿವೃದ್ಧಿ, ಕುಡಿಯುವ ನೀರು ಸರಬರಾಜು ಹಾಗೂ ಬೀದಿ ದೀಪ ವ್ಯವಸ್ಥೆಗಾಗಿ ಈ ಅನುದಾನವನ್ನು ವಿನಿಯೋಗಿಸಬೇಕು ಎಂದು ಸೂಚಿಸಿದರು.

    ಅನುದಾನವನ್ನು ನಿಯಮಬದ್ಧವಾಗಿ ಬಳಸಬೇಕು. ಅನುದಾನ ವಿನಿಯೋಗದಲ್ಲಿ ಲೋಪ ಕಂಡುಬಂದರೆ ತನಿಖೆಗೊಳಪಡಿಸಿ ಕಾನೂನು ಕ್ರಮಕ್ಕೆ ಗುರಿಪಡಿಸಲಾಗುವುದು. ಮಣ್ಣಿನ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಮಳೆ ಬಂದರೆ ಕಿತ್ತು ಹೋಗುವ ರಸ್ತೆಗಳನ್ನು ನಿರ್ಮಿಸಬಾರದೆಂದು ಎಚ್ಚರಿಕೆ ನೀಡಿದ ಅವರು ನಿರ್ಮಾಣ ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಿದ 6 ವಾರ್ಡುಗಳನ್ನು ಹೊರತುಪಡಿಸಿ ಉಳಿದೆಲ್ಲ ವಾರ್ಡುಗಳ ಅಭಿವೃದ್ಧಿಗೆ ಅನುದಾನವನ್ನು ಸಮಾನವಾಗಿ ಹಂಚಿಕೆ ಮಾಡಬೇಕು.

    ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಅಸ್ಗರ್ ಬೇಗ್, ಪಾಲಿಕೆ ಇಂಜಿನಿಯರ್ ವಿನಯ್, ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.