ಬೆಂಗಳೂರು: ಮತ್ತೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೆಚ್ಚಿನ ತಪಾಸಣೆಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ತೆರಳಿದ್ದಾರೆ ಎಂದು ವರದಿಯಾಗಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಇಂದು ವೈದ್ಯರು ತಪಾಸಣೆ ನಡೆಸಿದ ನಂತರ ಅಗತ್ಯಬಿದ್ದರೆ ಆಸ್ಪತ್ರೆಗೆ ದಾಖಲಾಗಬಹುದು ಎಂದು ಹೇಳಲಾಗಿದೆ.
ಕೆಲಸದ ಒತ್ತಡ, ನಿರಂತರ ಪ್ರವಾಸಗಳಿಂದಾಗಿ ಅನಾರೋಗ್ಯಕ್ಕೆ ತುತ್ತಾಗಿರಬಹುದು ಎಂದು ಹೇಳಲಾಗುತ್ತಿದೆ. ಕಳೆದ ವರ್ಷ ಲೋಕಸಭೆ ಚುನಾವಣೆಗೆ ಮುನ್ನ ಕುಮಾರಸ್ವಾಮಿಯವರು ಚೆನ್ನೈ ಅಪೊಲೋ ಆಸ್ಪತ್ರೆಯಲ್ಲಿ ಹೃದಯಕ್ಕೆ ಸಂಬಂಧಿಸಿ ಚಿಕಿತ್ಸೆ ಪಡೆದುಕೊಂಡು ಸ್ವಲ್ಪ ದಿನ ವಿಶ್ರಾಂತಿ ಪಡೆದು ನಂತರ ರಾಜಕೀಯ ಚಟುವಟಿಕೆಗಳಿಗೆ ಮರಳಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4