ಗದಗ: ಕರ್ನಾಟಕದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಗದಗದ ಬೆಟಗೇರಿ ಪೊಲೀಸರು ಬಂಧಿಸಿದ್ದಾರೆ.
ರೋಣ ತಾಲೂಕಿನ ಸೂಡಿ ಗ್ರಾಮದ ನಿವಾಸಿ ವೀರಣ್ಣ ಬೀಳಗಿ ಬಂಧಿತ ವ್ಯಕ್ತಿ. ಈತ ಸಚಿವರ ವಿರುದ್ಧ ಪ್ರಚೋದನಕಾರಿ ಪೋಸ್ಟ್ ಹಾಕಿದ್ದು, “ಸಚಿವರನ್ನು ನಿಲ್ಲಿಸಿ AK-47 ನಿಂದ ಗುಂಡಿನ ಮಳೆಗರೆಯಬೇಕು” ಎಂದು ಬರೆದುಕೊಂಡಿದ್ದ ಎನ್ನಲಾಗಿದೆ.
ಸಚಿವರ ವಿರುದ್ಧ ಅವಹೇಳನಕಾರಿ ಪದ ಬಳಸಿ ಜೀವ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಬಿ.ಬಿ. ಅಸೂಟಿ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಡಿಸೆಂಬರ್ 14ರಂದು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


