ಬೀದರ್: ಹೃದಯಾಘಾತದಿಂದ ನಿಧನರಾದ ವೀರ ಯೋಧ ಅನಿಲ್ ಕುಮಾರ್ ಅವರ ಅಂತಿಮ ದರ್ಶನವನ್ನು ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪಡೆದರು.
ಸಿಕ್ಕಿಂ ಹಿಮಪಾತದಲ್ಲಿ ಕರ್ತವ್ಯದಲ್ಲಿರುವಾಗ ಹೃದಯಾಘಾತದಿಂದ ನಿಧನರಾಗಿರುವ ಬೀದರ ಜಿಲ್ಲೆಯ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ವೀರ ಯೋಧ ಅನಿಲ್ ಕುಮಾರ್ ನವಾಡೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ವೀರ ಯೋಧ ಅನಿಲ್ ಕುಮಾರ್ ಅವರ ಕುಟುಂಬ ಸದಸ್ಯರಿಗೆ ಧೈರ್ಯವನ್ನು ತುಂಬಿ ಸಾಂತ್ವನ ಹೇಳಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA