ಬೀದರ್ ಜಿಲ್ಲೆಯಲ್ಲಿ ಸಚಿವ ಈಶ್ವರ ಖಂಡ್ರೆ ಮಳೆ ಹಾನಿ ವೀಕ್ಷಿಸಿದದರು. ಕಳೆದ ವಾರ ಬೀದರ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಬೀದರ ಜಿಲ್ಲೆಯಲ್ಲಿ ಸಾಕಷ್ಟು ಮನೆಗಳು ಹಾಗೂ ಬೆಳೆ ಹಾನಿಯಾಗಿದ್ದು, ಈ ಹಿನ್ನೆಲೆ ಗ್ರಾಮಗಳಿಗೆ ಅವರು ಭೇಟಿ ನೀಡಿದರು.
ಬೀದರ್ ದಕ್ಷಿಣ ಕ್ಷೇತ್ರದ ಖಾಶೆಂಪುರ್, ಕಾಡವಾದ, ಚಟ್ನಳ್ಳಿ ಗ್ರಾಮಗಳಿಗೆ ಜಿಲ್ಲೆಯ ಉನ್ನತ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ, ಮನೆಯ ಗೋಡೆಗಳು ಹಾಗೂ ಮೇಲ್ಛಾವಣಿಗಳು ಕುಸಿದು ಬಿದ್ದಿರುವ ಬಗ್ಗೆ ಪರಿಶೀಲನೆ ನಡೆಸಿದರು.
ಭಾಗಶಃ ಕುಸಿದಿರುವ ಮನೆಗೆ ತುರ್ತು 6,500 ರೂ. ನೀಡುವಂತೆ ಆದೇಶ ನೀಡಿದ ಅವರು, 50 ಸಾವಿರ ಪರಿಹಾರ ನೀಡುವಂತೆ ಸೂಚನೆ ನೀಡಿದರಲ್ಲದೇ, ಪೂರ್ತಿ ಮನೆ ಬಿದ್ದಿರುವ ಸಂತ್ರಸ್ಥರಿಗೆ (NDRF-SDRF) ಅಡಿ 1 ಲಕ್ಷ 20 ಸಾವಿರ ಹಾಗೂ ಸರ್ಕಾರದ ವತಿಯಿಂದ ಒಂದು ಮನೆ ಕೊಡುವ ಭರವಸೆಯನ್ನು ಸಚಿವ ಈಶ್ವರ ಖಂಡ್ರೆ ನೀಡಿದರು.
ಮಳೆ ಅವಾಂತರದಿಂದ ಜಿಲ್ಲೆಯ ಜನರಿಗೆ ಸಂಕಷ್ಟ ಆಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA