nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ

    March 13, 2026

    ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ

    March 13, 2026

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026
    Facebook Twitter Instagram
    ಟ್ರೆಂಡಿಂಗ್
    • ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ
    • ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    • ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ
    • ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ
    • ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ
    • ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ
    • ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡೆಪ್ಯೂಟಿ ತಹಶೀಲ್ದಾರ್, ಕಂದಾಯ ಅಧಿಕಾರಿಗಳ ಮೇಲೆ ಹಲವಾರು ದೂರುಗಳಿವೆ: ಅಧಿಕಾರಿಗಳಿಗೆ ಸಚಿವ ಕೆ.ಎನ್.ರಾಜಣ್ಣ ಎಚ್ಚರಿಕೆ
    ಜಿಲ್ಲಾ ಸುದ್ದಿ August 24, 2023

    ಡೆಪ್ಯೂಟಿ ತಹಶೀಲ್ದಾರ್, ಕಂದಾಯ ಅಧಿಕಾರಿಗಳ ಮೇಲೆ ಹಲವಾರು ದೂರುಗಳಿವೆ: ಅಧಿಕಾರಿಗಳಿಗೆ ಸಚಿವ ಕೆ.ಎನ್.ರಾಜಣ್ಣ ಎಚ್ಚರಿಕೆ

    By adminAugust 24, 2023No Comments2 Mins Read
    k n rajanna

    ಮಧುಗಿರಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಸ್ಥಳದಲ್ಲೇ ಅಹವಾಲುಗಳನ್ನು ಇತ್ಯರ್ಥ ಪಡಿಸುವ ಉದ್ದೇಶದಿಂದ ಪ್ರಪ್ರಥಮ ಬಾರಿಗೆ ಐ.ಡಿ. ಹಳ್ಳಿ ಹೋಬಳಿಯಲ್ಲಿ ಮೊದಲ ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.

    ಮಧುಗಿರಿ ತಾಲ್ಲೂಕು.ಐಡಿ.ಹಳ್ಳಿ ಹೋಬಳಿಯ ಗ್ರಾಮ ಪಂಚಾಯಿತಿ ಕಾರ್ಯಾಲಯ ಮುಂಭಾಗದಲ್ಲಿ ನಡೆದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
    ಕಂದಾಯ ಇಲಾಖೆ, ಆರ್.ಡಿ.ಪಿ.ಆರ್ ಇಲಾಖೆ ಗಳಿಗೆ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ಎಲ್ಲಾ ಇಲಾಖೆಗಳಿಗೆ ಸಾರ್ವಜನಿಕರು ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ನಿವೇಶನ ಇರುವರಿಗೆ ಗೃಹ ನಿರ್ಮಾಣ ಸೌಲಭ್ಯ ಹಾಗೂ ನಿವೇಶನ ಇಲ್ಲದವರಿಗೆ ನಿವೇಶನಗಳನ್ನು ಮಂಜೂರು ಮಾಡಬೇಕು, ಆಗಸ್ಟ್ 30ರಂದು ಎಲ್ಲಾ ಅರ್ಹ ಮಹಿಳಾ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಲಿದೆ, ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ಸೌಲಭ್ಯಗಳನ್ನು ತಲುಪುಸುವುದೇ ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ, ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಿ ಪಂಚಾಯತ್ ಮಟ್ಟದ ಸಮಸ್ಯೆಗಳನ್ನು ಬಗೆಹರಿಸಲು ಕ್ರಮವಹಿಸಲಾಗುತ್ತದೆ ಎಂದರು.


    Provided by
    Provided by

    ಡೆಪ್ಯೂಟಿ ತಹಶೀಲ್ದಾರ್ ಗಳು ಹಾಗೂ ಕಂದಾಯ ಅಧಿಕಾರಿಗಳು ಮೇಲೆ ಹಲವಾರು ದೂರುಗಳಿದ್ದು, ಯಾರೂ ಕೇಂದ್ರಸ್ಥಾನದಲ್ಲಿ ಇಲ್ಲದಿರುವುದು ಸರಿಯಲ್ಲ.ಜನರ ಸಮಸ್ಯೆಗೆ ಪರಿಹಾರ ನೀಡಿದರಷ್ಟೇ ನಿಮಗೆ ಬೆಲೆ. ದರಕಾಸ್ತು ಜಮೀನು, ಪವತಿ ಖಾತೆಗಳ ವಿಲೇವಾರಿಗೆ ಕ್ರಮವಹಿಸಬೇಕು. ಹಿಂದೆ ಶಾಲೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಿಗುತ್ತಿದ್ದು, ಈಗ ಮತ್ತೆ ಆರಂಭಿಸಬೇಕು. ಎತ್ತಿನಹೊಳೆ ಯೋಜನೆಯಲ್ಲಿ ಕೆರೆಗಳಿಗೆ 1 ವರ್ಷದಲ್ಲಿ ನೀರು ಹರಿಸುವ ವಿಶ್ವಾಸವಿದೆ ಎಂದರು.

    ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗಿದೆ, ಅಗತ್ಯ ಇರುವ ಕಡೆ ಗೋಶಾಲೆಗಳನ್ನು ಸ್ಥಾಪಿಸಲಾಗುತ್ತಿದೆ, ಎತ್ತಿನಹೊಳೆ ಯೋಜನೆಯಡಿ ಹಲವು ಕೆರೆಗಳು ತುಂಬಿಸಲಾಗುತ್ತದೆ, ಅಗತ್ಯ ಇರುವವರಿಗೆ ಹಸು, ಕುರಿ, ಮೇಕೆ ಸಾಕಾಣಿಕೆಗೆ ಬಡ್ಡಿರಹಿತ ಸಾಲವನ್ನು ನೀಡಲು ಕ್ರಮ ವಹಿಸಲಾಗಿದೆ.

    ಸಾರ್ವಜನಿಕ ಆಸ್ತಿಗಳ ಸಂರಕ್ಷಿಸಿ, ಅವುಗಳ ಉಪಯೋಗವನ್ನು ಮುಂದಿನ ಪೀಳಿಗೆಗೆ ತಲುಪಿಸಲಾಗುವ ಹೊಣೆಗಾರಿಕೆ ನಮ್ಮೆಲ್ಲರದಾಗಿದೆ, ಸಾರ್ವಜನಿಕರ ಸಮಸ್ಯೆಗಳು ಏನೇ ಇದ್ದರೂ ನನ್ನ ಗಮನಕ್ಕೆ ತರಬೇಕು, ಕಳೆದ ಬಾರಿ ಶಾಸಕರಾಗಿದ್ದ ಸಂದರ್ಭದಲ್ಲಿ ಸುಮಾರು 16,400 ಮನೆಗಳನ್ನು ತಾಲೂಕಿನಲ್ಲಿ ನಿರ್ಮಾಣ ಮಾಡಿಸಿ, ಗುಡಿಸಲು ಮುಕ್ತ ತಾಲೂಕನ್ನಾಗಿ ಮಾಡಲಾಯಿತು ಎಂದರು. ರೈತರು ಸಣ್ಣ ಪುಟ್ಟ ಸಮಸ್ಯೆ, ವ್ಯಾಜ್ಯಗಳಿಗೆ ಪರಸ್ಪರ ದ್ವೇಷ ಸಾಧಿಸಬಾರದು, ಪರಸ್ಪರ ಸಹಕಾರ, ನಂಬಿಕೆಯಿಂದ ಅಭಿವೃದ್ಧಿ ಸಾಧ್ಯ ಎಂದರು.

    ಜಿಲ್ಲಾಧಿಕಾರಿ ಕೆ. ಶ್ರೀನಿವಾಸ ಮಾತನಾಡಿ, ಹೋಬಳಿ ಮಟ್ಟದ ಜನ ಸಂಪರ್ಕ ಹಾಗೂ ಸಾರ್ವಜನಿಕರ ಕುಂದುಕೊರತೆಗಳ ನಿವಾರಣೆ ಸಭೆಯ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ಸಮರ್ಪಕವಾಗಿ ಬಗೆಹರಿಸಬಹುದಾಗಿದ್ದು, ಇದೊಂದು ಉತ್ತಮ ಜನೋಪಕಾರಿ ಸಭೆಯಾಗಿದೆ, ವಿವಿಧ ಇಲಾಖೆಗಳು, ನಿಗಮಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ, ಸಾರ್ವಜನಿಕರು ಅರ್ಜಿ ಸಲ್ಲಿಸಿದ ಕೂಡಲೇ ಸ್ಥಳದಲ್ಲೇ ಅಹವಾಲುಗಳನ್ನು ಇತ್ಯರ್ಥಪಡಿಸುವಂತೆ ಸೂಚಿಸಲಾಗಿದೆ, ಸಾರ್ವಜನಿಕರು ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ನರಸಿಂಹಮೂರ್ತ, ಕೆಎಂಎಫ್ ಮೈದನಹಳ್ಳಿ ಕಾಂತರಾಜು, ಇಂದಿರಾ ದೇನ ನಾಯಕ್, ಸುವರ್ಣಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲಯ್ಯ, ಸದಾಶಿವ ರೆಡ್ಡಿ, ಶನಿವಾರರೆಡ್ಡಿ ಸುರೇಂದ್ರ , ಕೃಷಿ ಇಲಾಖೆಯ ಉಪ ನಿರ್ದೇಶಕಿ ದೀಪಶ್ರೀ, ಡಿಹೆಚ್ಒ ಡಾ ಮಂಜುನಾಥ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ್, ತಹಶೀಲ್ದಾರ್ ಸಿಬ್ಗತ್ ವುಲ್ಲಾ, ಇ ಓ ಲಕ್ಷ್ಮಣ್, ಮಧುಸೂದನ್, ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿ ಶಬ್ಬೀರ್, ಕೆಎಂಎಫ್ ಮೈದನಹಳ್ಳಿ ಕಾಂತರಾಜು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಗ್ರಾಮಸ್ಥರು ಇದ್ದರು.

    ವರದಿ: ಆಬಿದ್ ಮಧುಗಿರಿ

    admin
    • Website

    Related Posts

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ

    March 11, 2026

    ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ

    March 11, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ

    March 13, 2026

    ತುಮಕೂರು: ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ಕದ್ದೊಯ್ದಿದ್ದ ಆರೋಪಿಯನ್ನು ದೂರು ದಾಖಲಾದ 24 ತಾಸಿನೊಳಗೆ ಕುಣಿಗಲ್ ಉಪವಿಭಾಗದ ಪೊಲೀಸರು ಸೆರೆಹಿಡಿದಿದ್ದಾರೆ.…

    ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ

    March 13, 2026

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.