ತುಮಕೂರು: ಮಧುಗಿರಿಯ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ದೊಡ್ಡೇರಿ ಹೋಬಳಿ ಬುಳಸಂದ್ರ ಗ್ರಾಮದಲ್ಲಿ ಜಾತ್ರೆ ಹಿನ್ನೆಲೆ ಶನಿವಾರ ಮನೆಯಲ್ಲಿ ತಯಾರಿಸಿದ ಆಹಾರ ಸೇವಿಸಿ ವಾಂತಿ, ಭೇದಿ ಸಮಸ್ಯೆಯಿಂದ ಅಸ್ವಸ್ಥಗೊಂಡು ತಾಲ್ಲೂಕು ಆಸ್ಪತ್ರೆ ಹಾಗೂ ತುಮಕೂರು ನಗರದ ಶ್ರೀದೇವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಸಚಿವ ಕೆ.ಎನ್.ರಾಜಣ್ಣ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.
ಬುಳಸಂದ್ರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಶಾಲೆಯಲ್ಲಿ ಏರ್ಪಡಿಸಿರುವ ಶಿಬಿರಕ್ಕೆ ಆಗಮಿಸಿ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮಸ್ಥರಿಂದ ಅವರು ಮಾಹಿತಿ ಪಡೆದರು.
ಈ ಘಟನೆ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ ಅವರು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾದದೆ ಧೈರ್ಯದಿಂದ ಇರಲು ಮನವರಿಕೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಯಾದ ಶುಭ ಕಲ್ಯಾಣ್ ರವರು, ಸಿ.ಇ.ಓ ಪ್ರಭು, ಡಿ.ಎಚ್.ಓ. ಮಂಜುನಾಥ್, ಉಪವಿಭಾಗ ಅಧಿಕಾರಿಗಳಾದ ಗೊಟೂರು ಶಿವಪ್ಪ, ಇ.ಓ ಲಕ್ಷಣ್, ಟಿ.ಎಚ್.ಓ. ಶ್ರೀನಿವಾಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q