ಮಂಡ್ಯ: ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮೀ ಯೋಜನೆ ಬಂದಿಲ್ಲ ಅಂತ ಫಲಾನುಭವಿಗಳು ಟೆನ್ಷನ್ ನಲ್ಲಿದ್ದಾರೆ. ಈ ನಡುವೆ ಎರಡು ತಿಂಗಳ ಹಣವನ್ನೂ ಒಟ್ಟಿಗೆ ಬ್ಯಾಂಕ್ ಅಕೌಂಟ್ ಗೆ ಜಮಾ ಮಾಡ್ತೀವಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಅಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಗೃಹ ಲಕ್ಷ್ಮೀ ಹಣ ಬಂದಿದ್ಯಾ ಅಂತ ಕಳೆದೆರಡು ತಿಂಗಳಿನಿಂದ ಮನೆಯಜಮಾನಿಯರು ಬ್ಯಾಂಕ್ ಗೆ ಬರ್ತಾ ಇದ್ದಾರೆ, ಹೋಗ್ತಾ ಇದ್ದಾರೆ. ಆದರೂ ಗೃಹಲಕ್ಷ್ಮೀ ಯೋಜನೆಯ ಹಣ ಬಂದಿರಲಿಲ್ಲ. ಇದೀಗ ಎರಡು ತಿಂಗಳ ಹಣವನ್ನೂ ಒಟ್ಟಿಗೆ ಬ್ಯಾಂಕ್ ಅಕೌಂಟ್ ಗೆ ಜಮಾ ಮಾಡುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಮುಂದಾಳತ್ವದಲ್ಲಿ ಮಂಡ್ಯದಲ್ಲಿ ಮಂಗಳವಾರ ನಡೆದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಅವರು ತಿಳಿಸಿದರು.
ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೇಂದ್ರದಲ್ಲಿ ಬಿಜೆಪಿ ಸರ್ಕಾರ 10 ವರ್ಷದಿಂದ ಅಧಿಕಾರದಲ್ಲಿದ್ದರೂ ಕರ್ನಾಟಕಕ್ಕೆ ಅವರ ಕೊಡುಗೆ ಶೂನ್ಯ. ತಮ್ಮ ವೈಫಲ್ಯವನ್ನು ಮುಚ್ಚಿಹಾಕಿಕೊಳ್ಳಲು ಇಂದು ಬಿಜೆಪಿ ಪಾದಯಾತ್ರೆ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದರು.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ಬೀಳಿಸುವ ಕನಸು ಕಾಣುತ್ತಿದ್ದಾರೆ. ಕರ್ನಾಟಕದ ಜನತೆಗೆ ಕೇಂದ್ರ ಸರ್ಕಾರ ಮೋಸ ಮಾಡುತ್ತಲೇ ಬಂದಿದೆ ಎಂದರು.
ತನ್ನ ಗರ್ಭದಲ್ಲಿ ಭ್ರಷ್ಟಾಚಾರವನ್ನೇ ತುಂಬಿಕೊಂಡು, ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರು ಎನ್ನುವಂತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಕೇವಲ ಒಂದು ವರ್ಷದ ಹಿಂದೆ ಆಡಳಿತಕ್ಕೆ ಬಂದಿರುವ ನಮ್ಮ ಸರಕಾರದ ಮೇಲೆ ಇಲ್ಲದ ಆರೋಪಗಳನ್ನು ಮಾಡುವ ಮೂಲಕ ಜನಪರ ಆಡಳಿತ ನಡೆಸುವುದಕ್ಕೆ ಸಹಕಾರ ನೀಡುವ ಬದಲು ವಿನಾಕಾರಣ ಅಡ್ಡಿ ಉಂಟು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296