ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಂಬಡಗಟ್ಟಿಯ ಸಮೀಪ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನಿನ ಎಲ್ 1 ಮತ್ತು ಎಲ್ 4 ಮೂಳೆ ಮುರಿತವಾಗಿದೆ. ಕುತ್ತಿಗೆಗೆ ಪೆಟ್ಟಿಗೆ ಬಿದ್ದಿದೆ. ಮೆದುಳು ಬಾವು ಬಂದಿದೆ. ಹೀಗಾಗಿ ಚಿಕಿತ್ಸೆ ನೀಡುತ್ತಿದ್ದೇವೆ. ಶೀಘ್ರದಲ್ಲೇ ಗುಣಮುಖರಾಗುತ್ತಾರೆ ಎಂದು ವೈದ್ಯರು ತಿಳಿಸಿದ್ದಾರೆ.
ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಗಿದೆ. ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.ಬೆಳಗ್ಗೆ ಆರು ಘಂಟೆಯ ಸಮಯದಲ್ಲಿ ಕಾರು ಅಪಘಾತವಾಗಿದೆ.
ಘಟನೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರಿಗೂ ಗಾಯವಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಸಿಎಲ್ ಪಿ ಸಭೆ ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ರಸ್ತೆ ಮಾರ್ಗದ ಮೂಲಕ ಬರುತ್ತಿದ್ದರು. ಅಂಬಡಗಟ್ಟಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx