ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇದೇ ವೇಳೆ ಕಳೆದ 13 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರಿಗೆ ಹಾಗೂ ಸಿಬ್ಬಂದಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಕೃತಜ್ಞತೆ ಸಲ್ಲಿಸಿದ್ದಾರೆ.
ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಆಗಬಾರದ ದುರ್ಘಟನೆ ಆಯಿತು. ಕೊನೇ ಹಂತ ನೋಡಿ ಹೋರಾಟ ಮಾಡಿ ಬಂದಿದ್ದೇನೆ. ಇದು ಪುನರ್ಜನ್ಮ ಅನಿಸುತ್ತೆ. ಹಿರಿಯರ ಆಶೀರ್ವಾದ, ತಂದೆ ತಾಯಿ ಆಶೀರ್ವಾದ, ಮುಖ್ಯಮಂತ್ರಿ, ಸಚಿವರು, ಶಾಸಕರು, ಡಿಸಿಎಂ ಮತ್ತು ಸುರ್ಜೇವಾಲ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು.ಕ್ಷೇತ್ರದ ಎಲ್ಲ ಮತದಾರರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು.
ವಿಡಿಯೋ ಕಾನ್ಪರೆನ್ಸ್ ಮೂಲಕ ಕೆಲಸ ಮಾಡ್ತಿದ್ದೇನೆ. ವೈದ್ಯರು ಇನ್ನೂ ಮೂರು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ಹೇಳಿದ್ದಾರೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx