ಬೆಳಗಾವಿ: ಸಿದ್ದಗಂಗಾ ಮಠಕ್ಕೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕೊಟ್ಟ ನೋಟಿಸ್ ವಾಪಸ್ ಪಡೆಯಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಸುವರ್ಣ ಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಏಪ್ರಿಲ್ ನಲ್ಲಿ ಕೊಟ್ಟ ನೋಟಿಸ್ ಇದಾಗಿದೆ. ಕೆರೆಯಿಂದ ನೀರು ಬಳಕೆ ಮಾಡಿರುವುದಕ್ಕೆ ಈ ನೋಟಿಸ್ ಕೊಡಲಾಗಿದೆ. ಆದರೆ ಅದನ್ನು ವಾಪಸ್ ಪಡೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.
ಸಿದ್ದಗಂಗಾ ಮಠ ವಿಶ್ವಕ್ಕೆ ಮಾದರಿಯಾದ ಮಠವಾಗಿದೆ. ಮಕ್ಕಳಿಗೆ ಶಿಕ್ಷಣ, ದಾಸೋಹ ಕೊಡುತ್ತಿರುವ ಮಠವಾಗಿದೆ. ಈ ಬಗ್ಗೆ ಮುಖ್ಯ ಇಂಜಿನಿಯರ್ ಸ್ವಾಮೀಜಿ ಜೊತೆ ಮಾತನಾಡಿದ್ದಾರೆ ಎಂದು ಸಚಿವರು ವಿವರ ನೀಡಿದರು.
ಸಿದ್ದಗಂಗಾ ಮಠ ನೀರನ್ನು ಬಳಸಿಕೊಂಡರೂ ತಪ್ಪಲ್ಲ. ಈ ಕುರಿತಾಗಿ ಸ್ವಾಮೀಜಿ ಜೊತೆಗೆ ಮಾತನಾಡುತ್ತೇನೆ. ಒಂದು ವೇಳೆ ನೀರು ಬಳಸದೆ ನೋಟಿಸ್ ಕೊಟ್ಟರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx