ಸರಗೂರು: ಮೈಸೂರಿನ ಮಾಲ್ ಆಫ್ ಮೈಸೂರ್ ನ ನೆಲಮಹಡಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಮೈಸೂರು ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಶನಿವಾರದಂದು ಉದ್ಘಾಟಿಸಿ ಚಲನಚಿತ್ರೋತ್ಸವ ಉಪಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಸುನೀಲ್ ಬೋಸ್ ಅಭಿಮಾನಿಗಳ ಬಳಗದ ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕು ಅಧ್ಯಕ್ಷ ದೇವಲಾಪುರ ಸಿದ್ದರಾಜುರವರನ್ನು ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವ ಡಾ.ಎಸ್.ಸಿ.ಮಹದೇವಪ್ಪ ರವರು ಸನ್ಮಾನಿಸಲಾಯಿತು.
ನಂತರ ಮಾತನಾಡಿದ ಸಚಿವರು, ಜಿಲ್ಲೆಯ ಗಡಿಭಾಗದ ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನ ಕಳೆದ ಬಾರಿ ಉಪಸಮಿತಿಯಲ್ಲಿ ಸದಸ್ಯರನ್ನ ಮಾಡಲಾಗಿತ್ತು.ಈ ಬಾರಿ ಎಲ್ಲಾ ತಾಲೂಕಿನ ಕಾರ್ಯಕರ್ತರನ್ನು ಅರ್ಜಿ ಆಹ್ವಾನ ನೀಡಲಾಗಿತ್ತು. ಜಿಲ್ಲೆಯ ಗಡಿಭಾಗದಲ್ಲಿ ಇರುವ ಕಾಡಂಚಿನ ಭಾಗದಲ್ಲಿರುವ ಗ್ರಾಮಗಳಿಗೆ ಅವರಿಗೆ ಒಂದು ಅವಕಾಶ ನೀಡುವ ನಿಟ್ಟಿನಲ್ಲಿ ಆಯ್ಕೆ ಮಾಡಲಾಯಿತು. ಅದರಂತೆ ಕೂಡ ಮೈಸೂರು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ನಂತರ ಉಪಸಮಿತಿ ಅಧ್ಯಕ್ಷ ಸುನೀಲ್ ಬೋಸ್ ಅಭಿಮಾನಿಗಳ ಬಳಗದ ತಾಲೂಕು ಅಧ್ಯಕ್ಷ ದೇವಲಾಪುರ ಸಿದ್ದರಾಜು ಮಾತನಾಡಿ, ದಸರಾ ಚಲನಚಿತ್ರೋತ್ಸವ ಉಪಸಮಿತಿ ರಚನೆಯಲ್ಲಿ ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಮಾನ್ಯತೆ ನೀಡುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಉಸ್ತುವಾರಿ ಸಚಿವ ಡಾ.ಎಸ್.ಸಿ.ಮಹದೇವಪ್ಪ ಹಾಗೂ ಸಂಸದ ಸುನೀಲ್ ಬೋಸ್ ಮತ್ತು ಶಾಸಕ ಅನಿಲ್ ಚಿಕ್ಕಮಾದು ಹೆಚ್ಚಿನ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ಗ್ರಾಮೀಣ ಭಾಗದವರಿಗೆ ಮಾನ್ಯತೆ ನೀಡುತ್ತಾ ಬರುತ್ತಿದ್ದಾರೆ. ಹೆಚ್ಚಿನ ರೀತಿಯಲ್ಲಿ ತಾಲೂಕಿನ ನಮ್ಮ ಶಾಸಕರಾದ ಅನೀಲ್ ಚಿಕ್ಕಮಾದುರವರು ಅವಕಾಶವನ್ನು ನೀಡುತ್ತ ಬರುತ್ತಿದ್ದಾರೆ. ಗ್ರಾಮೀಣ ಭಾಗದ ಜನರಿಗೆ ಅವಕಾಶ ಮಾಡಿಕೊಡಬೇಕೆಂದು ಒತ್ತಾಯದ ಮೇರೆಗೆ ಈ ಅವಕಾಶವನ್ನು ಒದಗಿಸುತ್ತಿದ್ದಾರೆ. ತಾಲ್ಲೂಕಿನ ಕಾರ್ಯಕರ್ತರು ಜಿಲ್ಲಾ ಮಟ್ಟದಲ್ಲಿ ದಸರಾ ಕಾರ್ಯಕ್ರಮದಲ್ಲಿ ಸ್ಥಾನವನ್ನು ಪಡೆದಯವಂತೆ ಮಾಡಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಎಂಎಲ್ಸಿ ತಿಮ್ಮಯ್ಯ.ಸಂಶೋಧಕ ಸಂಘದ ರಾಜ್ಯಾಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಡಾ.ಎಸ್.ಮರಿದೇವಯ್ಯ, ಇನ್ನೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮತ್ತು ಮುಖಂಡರು ಸೇರಿದಂತೆ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC