ಸರಗೂರು: ಅಂಗನವಾಡಿಗಳಲ್ಲಿ ಶಾಲಾ ಪೂರ್ವ ಶಿಕ್ಷಣದ ಪ್ರಾಮುಖ್ಯತೆಯನ್ನು ಸಮುದಾಯಕ್ಕೆ ತಿಳಿಸುವ ಸಲುವಾಗಿ ಹಾಗೂ ಆರಂಭಿಕ ಬಾಲ್ಯ ಶಿಕ್ಷಣದ ಗುಣಮಟ್ಟವನ್ನು ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯವಾದದ್ದು ಎಂಬುದನ್ನು ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ರವಿಕುಮಾರ್ ತಿಳಿಸಿದರು.
ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಶುಕ್ರವಾರದಂದು ಮಕ್ಕಳ ಜಾಗೃತಿ ಸಂಸ್ಥೆ, ಮುಳ್ಳೂರು ಗ್ರಾಮ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹೆಚ್ ಸಿಎಲ್ ಪೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಮುಳ್ಳೂರು ವೃತದ ಅಂಗನವಾಡಿ ಹಬ್ಬ ಕಾರ್ಯಕ್ರಮವನ್ನು ಮುಳ್ಳೂರಿನ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದು ಗಣ್ಯರು ಕಾರ್ಯಕ್ರಮವನ್ನು ಟೇಪ್ ಕಟ್ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಇಂತಹ ಕಾರ್ಯಕ್ರಮಗಳು ಆರು ತಿಂಗಳಿಗೊಮ್ಮೆ ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲೂ ನಡೆಯಬೇಕು. ಇದರಿಂದ ಮಕ್ಕಳಿಗೆ ಹಾಗೂ ಪೋಷಕರಿಗೆ ಒಂದು ಅರಿವು ಉಂಟಾಗುತ್ತದೆ. ಹಾಗೂ ಎಲ್ಲಾ ಕ್ಷೇತ್ರದ ಬೆಳವಣಿಗೆಗಳು ಸಾಧ್ಯವಾಗುತ್ತದೆ. ಮಕ್ಕಳ ಜಾಗೃತಿ ಸಂಸ್ಥೆಯು ಒಂದು ಉತ್ತಮ ಕಾರ್ಯಕ್ರಮವನ್ನು ಮಾಡುತ್ತ ಬಂದಿದ್ದು, ಇದು ತುಂಬಾ ಶ್ಲಾಘನೀಯವಾಗಿದೆ ಎಂದು ತಿಳಿಸಿದರು.
ಮುಳ್ಳೂರು ಗ್ರಾಮ ಪಂಚಾಯಿತಿ ಅಧಿಕಾರಿ ನಾಗೇಂದ್ರ ಮಾತನಾಡಿ, ಈ ಹಬ್ಬದಲ್ಲಿ ಭಾರತೀಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸುವ ಅರಿಶಿಣ, ಕುಂಕುಮ, ಬಳೆ, ಹೂಗಳನ್ನು ನೀಡುವ ಮೂಲಕ ಎಲ್ಲರನ್ನು ಸ್ವಾಗತಿಸಲಾಯಿತು. ಮಕ್ಕಳಲ್ಲಿ ಪ್ರಮುಖವಾಗಿ ಆಗುವ ದೈಹಿಕ, ಮಾತು ಮತ್ತು ಭಾಷೆ, ಬೌದ್ಧಿಕ, ಸಾಮಾಜಿಕ ಹಾಗೂ ಭಾವನಾತ್ಮಕ ಬೆಳವಣಿಗೆಗಳು, ಪೋಷಣೆ, ಪೋಷಕರಿಗೆ ಕ್ರಿಯಾತ್ಮಕ ಆಟಗಳ ಸ್ಟಾಲ್ ಗಳನ್ನು ಆಯೋಜಿಸಲಾಗಿತ್ತು. ಪ್ರತಿಯೊಂದು ಸ್ಟಾಲ್ ನಲ್ಲೂ ಮಕ್ಕಳ ಬೆಳವಣಿಗೆಗೆ ಸಂಬಂಧಿಸಿದ ಚಟುವಟಿಕೆಗಳು ಮತ್ತು ಪೋಸ್ಟರ್ ಗಳನ್ನೂ ಮುಳ್ಳೂರು ವೃತ್ತದ ಶಿಕ್ಷಕಿಯರು, ಮಕ್ಕಳ ಜಾಗೃತಿ ಸಂಸ್ಥೆಯ ಸಂಯೋಜಕ ರೊಡಗೂಡಿ ಪೋಷಕರಿಗೆ ವಿವರಿಸಿದರು. ಮತ್ತು ಮಕ್ಕಳಿಗೆ,ಪೋಷಕರಿಗೆ ಚಟುವಟಿಕೆಗಳನ್ನು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮಕ್ಕೆ ಎಚ್.ಡಿ.ಕೋಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೀಪಾ ಮಾತನಾಡಿ ಒಟ್ಟಾರೆ 200ಕ್ಕೂ ಹೆಚ್ಚು ಪೋಷಕರು, ಮುಳ್ಳೂರು ವೃತ್ತದ ಶಿಕ್ಷಕಿಯರು ಹಾಗೂ ಸಹಾಯಕಿಯರು, ಸರಗೂರು ವೃತ್ತದ ಸಹಾಯಕಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂಗನವಾಡಿಯಲ್ಲಿ ಮಕ್ಕಳಿಗೆ ಶಾಲಾಪೂರ್ವ ಶಿಕ್ಷಣದಲ್ಲಿ ಮಕ್ಕಳ ಬೆಳವಣಿಗೆಗೆ ಪೂರಕವಾದ ಚಟುವಟಿಕೆಗಳನ್ನು ಪರಿಚಯ ಮಾಡಿಸುವುದರ ಮೂಲಕ ಪೋಷಕರು ಅಂಗನವಾಡಿ ಕಡೆ ತಿರುಗಿ ನೋಡುವಂತೆ ಮಾಡಲು ಮಕ್ಕಳ ಜಾಗೃತಿಗೆ ಸಾಕಷ್ಟು ಬೆಂಬಲವನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮ ಮುನ್ನ ಬಾಳೆ, ತಳಿರು, ತೋರಣ, ರಂಗವಲ್ಲಿಯಿಂದ ಹಬ್ಬದ ಸಂಭ್ರಮ ಕಳೆಕಟ್ಟಿತು. ದ್ವನಿವರ್ಧಕದ ಮೂಲಕ ಭಕ್ತಿ ಗೀತೆಗಳು ಹರಿದು ಬಂದವು. ಶಿಕ್ಷಕಿಯರು ಕುಣಿದು, ಕುಪ್ಪಳಿಸಿ ತಮ್ಮ ಸಂತೋಷವನ್ನು ವ್ಯಕ್ತ ಪಡಿಸಿದರು.
ಈ ಸಂದರ್ಭದಲ್ಲಿ ಮುಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಿನ್ನಮ್ಮ ರಾಮನಾಯಕ, ಅಂಗನವಾಡಿ ಮೇಲ್ವಿಚಾರಕಿ ಚಿನ್ನಮ್ಮ, ಗಾಯತ್ರಿ ಕಲ್ಲಂಬಾಳು ಗ್ರಾಪಂ ಅಭಿವೃದ್ಧಿ ಅಧಿಕಾರಿ ಜ್ಯೋತಿ, ಕಲ್ಲಂಬಾಳು ಗ್ರಾಪಂ ಸದಸ್ಯೆ ರೇಖಾನಿಲಕಂಠ, ಮುಳ್ಳೂರು ಗ್ರಾಪಂ ಸದಸ್ಯ ಶ್ರೀನಿವಾಸ್,ಜಯಮ್ಮ ,ರವಿ,ಗ್ರಾಮದ ಮುಖಂಡರು ರಾಜಶೇಖರ್, ಕುಮಾರ್, ಮಲ್ಲೇಶ್ ಮುಳ್ಳೂರು ವೃತ್ತದ ಯೂನಿಯನ್ ಲೀಡರ್ ಸುಮಾ, ಮಕ್ಕಳ ಜಾಗೃತಿ ಸಂಸ್ಥೆಯ ವ್ಯವಸ್ಥಾಪಕ ದಿವ್ಯ, ನವೀನ್ ಕುಮಾರ್ , ಹಾಗೂ ಮುಳ್ಳೂರು ವೃತ್ತದ ಸಂಯೋಜಕ ಪುನೀತ್ ಅಂಬಳೆ, ಸಿದ್ದರಾಜು ,ಮುಳ್ಳೂರು ವೃತ್ತದ ಅಂಗನವಾಡಿ ಮಕ್ಕಳು ಹಾಗೂ ಮುಳ್ಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಮುಳ್ಳೂರು ಪಿ.ಎಂ. ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC