ಕೊರಟಗೆರೆ: ಕೆ ಆರ್ ಐ ಡಿ ಎಲ್ ಇಲಾಖೆಯಿಂದ ಬಿಡುಗಡೆ ಆಗಿದ್ದ 10 ಲಕ್ಷ ರೂ. ಅನುದಾನದಿಂದ ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾ.ಪಂ.ನ ಐ.ಕೆ.ಕಾಲೋನಿಯಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟಿಸಲಾಯಿತು.
ಐ.ಕೆ.ಕಾಲೋನಿಯ ಬಹುದಿನದ ಬೇಡಿಕೆಯಾಗಿದ್ದ ಶುದ್ದ ಕುಡಿಯುವ ನೀರಿನ ಘಟಕವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿ ಇಲ್ಲಿನ ನಿವಾಸಿಗಳ ಜೊತೆಗೆ ಗ್ರಾಮದ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಇದೇ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಪಂ ಸಿಇಓ ಪ್ರಭು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4