ಬೆಳಗಾವಿ ನಗರಕ್ಕೆ ಆಗಮಿಸಿದ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ ಇಂದು ನಗರದ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ, ಕಾಂಗ್ರೆಸ್ ಪದಾಧಿಕಾರಿಗಳ ಜೊತೆ 2024ರ ಲೋಕಸಭೆಯ ಚುನಾವಣೆ ಕುರಿತು ಚರ್ಚಿಸಿದರು. ಬೆಳಗಾವಿ ಜಿಲ್ಲೆಯ ಎರಡು ಕ್ಷೇತ್ರಗಳು ಈ ಬಾರಿ ಕಾಂಗ್ರೆಸ್ ತೆಕ್ಕೆಗೆ ಬರಲಿವೆ.
ಕಾಂಗ್ರೆಸ್ ಸರ್ಕಾರ ನೀಡಿರುವ ಜನಪರ ಯೋಜನೆಗಳು ಮತ್ತು ಗ್ಯಾರಂಟಿಗಳ ಕುರಿತು ಜನರ ಭರವಸೆ ಗೆದ್ದು, ಕಾರ್ಯಕರ್ತರು ಅತಿ ಉತ್ಸಾಹದಿಂದ ಚುನಾವಣೆಯನ್ನು ಎದುರು ನೋಡ್ತಾ ಇದ್ದಾರೆ. ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕರುಗಳಾದ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಚುನಾವಣೆಯಲ್ಲಿ ಪ್ರಭಾವ ಇರಲಿದೆ.
ಪೌರಾಡಳಿತ ಇಲಾಖೆಯ ಯಾವುದೇ ಕೆಲಸಗಳು ಇದ್ದರೂ ನನ್ನ ಗಮನಕ್ಕೆ ತಂದರೆ ನಾನು ಕೂಡಲೇ ಪರಿಹಾರ ನೀಡುವೆ ಎಂದು ಸಚಿವರು ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೆಳಗಾವಿ ಜಿಲ್ಲಾ ಗ್ರಾಮೀಣ ಅಧ್ಯಕ್ಷರಾದ ವಿನಯ್ ನವಲಗಟ್ಟಿ ಹಾಗೂ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಲಕ್ಷ್ಮಣ್ ರಾವ್ ಚಿಂಗಳೆ ಸಚಿವರಿಗೆ ಹೂಗುಚ್ಚ ನೀಡಿ ಸನ್ಮಾನ ಮಾಡಿದರು.
ಈ ಸಂದರ್ಭದಲ್ಲಿ ಉತ್ತರ ಮತಕ್ಷೇತ್ರದ ಶಾಸಕರಾದ ರಾಜು ಸೆಟ್ ಬೆಳಗಾವಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರು ರಾಜ ಸಲೀಂ ಕೆಪಿಸಿಸಿ ಸದಸ್ಯ ಆಯುಷ್ಯಾ ತನದಿ ಬಸವರಾಜ್ ಹಾಗೂ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.


