nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ 24 ಲಕ್ಷ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇನ್ಮುಂದೆ ವಾಟ್ಸಾಪ್ ನಲ್ಲೇ ಉಚಿತ ಇ–ಖಾತಾ ವಿತರಣೆ!

    November 26, 2026

    ಸಂವಿಧಾನದ ಮೌಲ್ಯಗಳು ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನತೆಯ ಪಾತ್ರದ ಕುರಿತು ಯುವ ಸಂವಾದ

    November 26, 2026

    ಸಂವಿಧಾನ ಸಮರ್ಪಣಾ ದಿನ: ಸಂವಿಧಾನ ಕೇವಲ ಆಡಳಿತ ಗ್ರಂಥವಲ್ಲ, ಪ್ರತಿಯೊಬ್ಬ ಭಾರತೀಯನ ಸ್ವಾಭಿಮಾನದ ಉಸಿರು

    November 26, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರಿನ 24 ಲಕ್ಷ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇನ್ಮುಂದೆ ವಾಟ್ಸಾಪ್ ನಲ್ಲೇ ಉಚಿತ ಇ–ಖಾತಾ ವಿತರಣೆ!
    • ಸಂವಿಧಾನದ ಮೌಲ್ಯಗಳು ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನತೆಯ ಪಾತ್ರದ ಕುರಿತು ಯುವ ಸಂವಾದ
    • ಸಂವಿಧಾನ ಸಮರ್ಪಣಾ ದಿನ: ಸಂವಿಧಾನ ಕೇವಲ ಆಡಳಿತ ಗ್ರಂಥವಲ್ಲ, ಪ್ರತಿಯೊಬ್ಬ ಭಾರತೀಯನ ಸ್ವಾಭಿಮಾನದ ಉಸಿರು
    • ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯರಿಂದ ವೈಭವದ ಕನ್ನಡ ರಾಜ್ಯೋತ್ಸವ ಆಚರಣೆ
    • ಡಾ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ವೃದ್ಧಾಶ್ರಮಗಳಿಗೆ ದಿನಸಿ, ಹಣ್ಣು ವಿತರಣೆ
    • ಕೈದಾಳದ ಶ್ರೀ ಚೆನ್ನಕೇಶವ ಸ್ವಾಮಿ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭೇಟಿ | ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಗಣ್ಯರು
    • ಹೆಬ್ಬೂರಿನಲ್ಲಿ ಅಟಲ್‌ಜಿ ಜನಸ್ನೇಹಿ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ :  ಗ್ರಾಮೀಣ ಜನರಿಗೆ ಸರ್ಕಾರಿ ಸೇವೆಗಳು ತ್ವರಿತವಾಗಿ ದೊರೆಯಲು ಅನುಕೂಲ: ಡಾ.ಜಿ.ಪರಮೇಶ್ವರ್
    • 300 ಮೊಟ್ಟೆ ಚಾಕಿಯಿಂದ 250 ಕೆ.ಜಿ. ರೇಷ್ಮೆ ಗೂಡು ಉತ್ಪಾದನೆ ಸಾಧ್ಯ: ಮೋಹನ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    ರಾಜ್ಯ ಸುದ್ದಿ August 17, 2026

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    By adminAugust 17, 2026No Comments2 Mins Read
    ramalinga reddy.jpg

    ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನಸಭೆಯಲ್ಲಿ ಸುದೀರ್ಘ ಸ್ಪಷ್ಟನೆ ನೀಡಿದ್ದಾರೆ. ಅರಣ್ಯ ಸಿಬ್ಬಂದಿ ಉದ್ದೇಶಪೂರ್ವಕವಾಗಿ ಶೂಟೌಟ್ ನಡೆಸಿಲ್ಲ, ಬದಲಾಗಿ ಆತ್ಮರಕ್ಷಣೆಗಾಗಿ ಮರುದಾಳಿ ನಡೆಸಿದ್ದಾರೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

    ಸದನದಲ್ಲಿ ಸಚಿವರು ಘಟನೆಗೆ ಸಂಬಂಧಿಸಿದಂತೆ ಮಾತನಾಡಿ, ಮೃತಪಟ್ಟವರು ತಮ್ಮ ಜಮೀನಿಗೆ ಹೋಗಿರಲಿಲ್ಲ. ಬದಲಾಗಿ, ಶಾಗ್ಯ ಬಳಿಯ ಅರಣ್ಯ ಪ್ರದೇಶದೊಳಗೆ ಸುಮಾರು 5 ರಿಂದ 8 ಕಿಲೋಮೀಟರ್ ಅಕ್ರಮವಾಗಿ ಪ್ರವೇಶಿಸಿದ್ದರು. ಹಿಂದಿನ ದಿನ ರಾತ್ರಿ ಅಕ್ರಮ ಪ್ರವೇಶದ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ 10 ಸಿಬ್ಬಂದಿಯನ್ನೊಳಗೊಂಡ ಎರಡು ತಂಡಗಳನ್ನು ರಚಿಸಲಾಗಿತ್ತು. ಮುಂಜಾನೆ 5 ಗಂಟೆಯ ಸುಮಾರಿಗೆ ಕತ್ತಲೆಯಲ್ಲಿ ಬಂಡೆಯೊಂದರ ಬಳಿ ಬೆಳಕು ಕಂಡುಬಂದಾಗ, ಶರಣಾಗುವಂತೆ ಸಿಬ್ಬಂದಿ ಸೂಚಿಸಿದ್ದರು.

    ಎತ್ತರದ ಪ್ರದೇಶದಲ್ಲಿದ್ದ ಬೇಟೆಗಾರರು ಸಿಬ್ಬಂದಿಯತ್ತ ಮೊದಲು ಗುಂಡಿನ ದಾಳಿ ನಡೆಸಿದರು. ಈ ವೇಳೆ ಆತ್ಮರಕ್ಷಣೆಗಾಗಿ ಅರಣ್ಯ ಸಿಬ್ಬಂದಿ ಮರುದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿಗೂ ಸಣ್ಣಪುಟ್ಟ ಗಾಯಗಳಾಗಿವೆ.
    ಘಟನಾ ಸ್ಥಳದಿಂದ 2 ನಾಡಬಂದೂಕುಗಳು, ಕಾಡತೂಸುಗಳು, ಮದ್ದಿನ ಬಾಕ್ಸ್, ಪಟಾಕಿ, ಮೊಬೈಲ್ ಹಾಗೂ ಸುಮಾರು 20 ರಿಂದ 35 ಕೆಜಿಯಷ್ಟು ಜಿಂಕೆ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.

    ಪ್ರಕರಣ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದ್ದು, ತನಿಖೆಯಲ್ಲಿ ಅರಣ್ಯ ಸಿಬ್ಬಂದಿ ನಿಯಮ ಮೀರಿ ಉದ್ದೇಶಪೂರ್ವಕವಾಗಿ ತಪ್ಪು ಎಸಗಿರುವುದು ಕಂಡುಬಂದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

    ಮತ್ತೊಂದೆಡೆ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಈ ಘಟನೆಯನ್ನು ಖಂಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ನೀಡಬೇಕು ಹಾಗೂ ಪ್ರಕರಣದ ಸತ್ಯಾಸತ್ಯತೆ ಹೊರಬರಲು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ, ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

     

    admin
    • Website

    Related Posts

    ಬೆಂಗಳೂರಿನ 24 ಲಕ್ಷ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇನ್ಮುಂದೆ ವಾಟ್ಸಾಪ್ ನಲ್ಲೇ ಉಚಿತ ಇ–ಖಾತಾ ವಿತರಣೆ!

    November 26, 2026

    2027ರ ಸರ್ಕಾರಿ ರಜೆ ಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ

    November 22, 2026

    ಸತ್ಯ ಘಟನೆಯ “ಕಾಲಾಗ್ನಿ” ಚಿತ್ರಕ್ಕೆ ಮುಹೂರ್ತ |  ಸೆಸ್ಪೆನ್ಸ್, ಥ್ರಿಲ್ಲರ್ ಕುರಿತಾದ ಚಿತ್ರಕ್ಕೆ ರಾಯರ ಸನ್ನಿಧಿಯಲ್ಲಿ ಚಾಲನೆ

    November 21, 2026

    Leave A Reply Cancel Reply

    Our Picks

    ಡಿಸೆಂಬರ್ 3ರಂದು ದೇಶವ್ಯಾಪಿ ಬ್ಯಾಂಕ್ ಮುಷ್ಕರ: ಕಾರಣವೇನು ? ಗ್ರಾಹಕರು ಗಮನಿಸಬೇಕಾದದ್ದು ಏನು ?

    November 25, 2026

    ಎಸ್‌ ಬಿಐನಲ್ಲಿ ₹1 ಲಕ್ಷ ವೈಯಕ್ತಿಕ ಸಾಲ ಪಡೆದರೆ EMI ಎಷ್ಟು? ಬಡ್ಡಿದರದ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ!

    November 25, 2026

    ಆಡಿಟ್ ಹೆಸರಿನಲ್ಲಿ ಉದ್ಯಮಿಗಳಿಗೆ ಕಿರುಕುಳ? ₹4 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು CGST ಅಧೀಕ್ಷಕರಿಗೆ ಸಿಬಿಐ ಶಾಕ್!

    November 24, 2026

    ಪೆಟ್ರೋಲ್ ಬಂಕ್‌ ನಲ್ಲಿ ₹110, ₹210 ಅಥವಾ ₹510ಕ್ಕೇ ಪೆಟ್ರೋಲ್ ಹಾಕಿಸುವುದೇಕೆ? ಇದರ ಹಿಂದಿದೆ ಆಸಕ್ತಿದಾಯಕ ಕಾರಣಗಳು!

    November 23, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರಿನ 24 ಲಕ್ಷ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇನ್ಮುಂದೆ ವಾಟ್ಸಾಪ್ ನಲ್ಲೇ ಉಚಿತ ಇ–ಖಾತಾ ವಿತರಣೆ!

    November 26, 2026

    ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಜಿಬಿಎ ಹಾಗೂ…

    ಸಂವಿಧಾನದ ಮೌಲ್ಯಗಳು ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನತೆಯ ಪಾತ್ರದ ಕುರಿತು ಯುವ ಸಂವಾದ

    November 26, 2026

    ಸಂವಿಧಾನ ಸಮರ್ಪಣಾ ದಿನ: ಸಂವಿಧಾನ ಕೇವಲ ಆಡಳಿತ ಗ್ರಂಥವಲ್ಲ, ಪ್ರತಿಯೊಬ್ಬ ಭಾರತೀಯನ ಸ್ವಾಭಿಮಾನದ ಉಸಿರು

    November 26, 2026

    ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯರಿಂದ ವೈಭವದ ಕನ್ನಡ ರಾಜ್ಯೋತ್ಸವ ಆಚರಣೆ

    November 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.