ಬಾಗಲಕೋಟೆ: ಅಪಘಾತದ ಗಾಯಾಳುವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ತಮ್ಮದೇ ಕಾರಿನಲ್ಲಿ ಕರೆದೊಯ್ದು ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.
ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ಟ್ರ್ಯಾಕ್ಟರ್ ಹಿಂಬದಿ ಹೊರಟಿದ್ದ ಬೈಕ್ ಸವಾರ ಆಯತಪ್ಪಿ ಬಿದ್ದು ಗಾಯಗೊಂಡಿದ್ದರು. ಈ ವೇಳೆ ಜಮಖಂಡಿಯಿಂದ ಅದೇ ಮಾರ್ಗವಾಗಿ ಬರುತ್ತಿದ್ದ ಸಚಿವ ಸಂತೋಷ ಲಾಡ್ ಅವರು, ಬೈಕ್ ಸವಾರನನ್ನು ಲೋಕಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರು.
ಗಾಯಾಳು ಬೈಕ್ ಸವಾರ ಸತೀಶ್ ವೆಂಕಪ್ಪ ಮಾದರ ಅವರಿಗೆ ಮೊಣಕಾಲಿಗೆ ತೀವ್ರ ಗಾಯವಾಗಿತ್ತು. ಲೋಕಾಪುರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಕಳುಹಿಸಲು ಕ್ರಮ ಕೈಗೊಂಡರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4