ತುಮಕೂರು: ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಪ್ರಯಾಣದ ಮಧ್ಯೆ ದಿಢೀರ್ ಎದೆನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಚಿವ ಶಿವರಾಜ್ ತಂಗಡಗಿ ಅವರು ಕೊಪ್ಪಳದಿಂದ ಬೆಂಗಳೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಶಿರಾ ದಾಟಿ ತುಮಕೂರು ಸಮೀಪದ ಕೋರ ಎಂಬಲ್ಲಿಗೆ ಬರುತ್ತಿದ್ದಂತೆ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಸಿಬ್ಬಂದಿ ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿದರು.
ಆಸ್ಪತ್ರೆಯಲ್ಲಿ ಸಚಿವರಿಗೆ ಇಕೋ ಟೆಸ್ಟ್ (ECG) ಸೇರಿದಂತೆ ಹೃದಯಕ್ಕೆ ಸಂಬಂಧಿಸಿದ ವಿವಿಧ ವೈದ್ಯಕೀಯ ತಪಾಸಣೆಗಳನ್ನು ನಡೆಸಲಾಗಿದೆ. ಸದ್ಯ ಸಚಿವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ವಿಶ್ರಾಂತಿಗೆ ಸೂಚಿಸಲಾಗಿದೆ.
ಸಚಿವರು ಆಸ್ಪತ್ರೆಗೆ ದಾಖಲಾದ ವಿಷಯ ತಿಳಿಯುತ್ತಿದ್ದಂತೆಯೇ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅಶೋಕ್ ಹಾಗೂ ಡಿವೈಎಸ್‌ಪಿ ಚಂದ್ರಶೇಖರ್ ಅವರು ಆಸ್ಪತ್ರೆಗೆ ಧಾವಿಸಿ ಆರೋಗ್ಯ ವಿಚಾರಿಸಿದ್ದಾರೆ. ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯಕೀಯ ಮೂಲಗಳು ಖಚಿತಪಡಿಸಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


