ತುಮಕೂರು: ರಾಷ್ಟ್ರೀಯ ಹೆದ್ದಾರಿ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಖಡಕ್ಕಾಗಿ ಮಾತನಾಡಿ ಮಾಹಿತಿ ತೆಗೆದುಕೊಂಡರು.
ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಅವರು ಪುಲ್ ಕ್ಲಾಸ್ ತೆಗೆದುಕೊಂಡರು. ತುಮಕೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಯೋಜನೆ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಕುಂಠಿತಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಖಡಕ್ ಎಚ್ಚರಿಕೆ ನೀಡಿದರು.
‘ನನಗೆ ಯಾವುದೇ ಕಾರಣ ಕೊಡಬೇಡಿ ಕೆಲಸ ಮಾಡಿ ಮುಗಿಸಬೇಕು ಅಷ್ಟೇ. ಸಾರ್ವಜನಿಕರಿಗೆ ತೊಂದರೆಯಾಗಬಾರದು’ ಎಂದರು.
ಅದೇನು ಮಾಡ್ತಿರೋ ನನಗೆ ಗೊತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಗರಂ ಆದರು. ಅಲ್ಲದೆ ರಾಜ್ಯ ಸರ್ಕಾರದಿಂದ ಬೇಕಾಗಿರುವ ಸಹಕಾರದ ಕುರಿತು ಮಾಹಿತಿ ನೀಡುವಂತೆ ಸೂಚನೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


