ಜಯನಗರ ಸಾರ್ವಜನಿಕ ಆಸ್ಪತ್ರೆ ಭೇಟಿ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಸ್ವಚ್ಚತೆ, ಡಾಕ್ಟರ್ ಗಳ ಹಾಜರಾತಿ ಬಗ್ಗೆ ಸಾಕಷ್ಟು ದೂರು ಬಂದಿತ್ತು.
ಸಾಮಾಜಿಕ ಕಾರ್ಯಕರ್ತನ ಬಗ್ಗೆ ದೂರು ಬಂದಿತ್ತು. ವಿಧಾನಸಭೆಯಲ್ಲಿ ಜಯನಗರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಹೇಳಿದ್ದೆ. ಆದೇ ರೀತಿ ಇಂದು ಜಯನಗರ ಶಾಸಕರ ಸಮೇತ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಹೊರಗಿನಿಂದ ಬಂದು ಆಸ್ಪತ್ರೆಯಲ್ಲಿ ಹಸ್ತಕ್ಷೇಪ ಮಾಡುವುದು ತಪ್ಪು. ಏನೆಲ್ಲಾ ತೊಂದರೆ ಆಗುತ್ತಿದೆ ಅದಕ್ಕೆ ಅಗತ್ಯ ಕ್ರಮಗಳನ್ನ ತೆಗೆದುಕೊಳ್ಳುತ್ತೇವೆ.
N. R. ರಮೇಶ್ ಆಸ್ಪತ್ರೆಗಳಲ್ಲಿ ಶವಗಳ ಮಾಫಿಯಾ ನಡೆಯುತ್ತಿದೆ ಎಂಬ ಆರೋಪ ಮಾಡಿದ್ದಾರೆ. ಅವರು ಸಾಕಷ್ಟು ಆರೋಪ ಮಾಡುತ್ತಿರುತ್ತಾರೆ. ಅವರ ಬಳಿ ಮಾಹಿತಿ ಇದ್ದರೆ ಒದಗಿಸಲಿ, ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


