ಚಾಮರಾಜಪೇಟೆ ಕ್ಷೇತ್ರದ ಜಾಲಿ ಮೊಹಲ್ಲಾ ಹಾಗೂ ಭಕ್ಷಿ ಗಾರ್ಡನ್ ಕೊಳೆಗೇರಿಯಲ್ಲಿ ವಾಸಿಸುವ 262 ಕುಟುಂಬಗಳಿಗೆ ಶಾಶ್ವತ ವಸತಿ ವ್ಯವಸ್ಥೆ ಕಲ್ಪಿಸುವ ಬೇಡಿಕೆ ಕುರಿತು ಸ್ಥಳೀಯ ಶಾಸಕರು ಹಾಗೂ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊಳೆಗೇರಿ ಅಭಿವೃದ್ಧಿ ಮಂಡಳಿ ಪ್ರಧಾನ ಅಭಿಯಂತರ ಬಲರಾಜು, ಬಿಬಿಎಂಪಿ ಜಂಟಿ ಆಯುಕ್ತ ಯೋಗೇಶ್ ಅವರೊಂದಿಗೆ ಪರಿಶೀಲನೆ ನಡೆಸಿ, ಭಕ್ಷಿ ಗಾರ್ಡನ್ ನಲ್ಲಿ ರಾಜಕಾಲುವೆ ಮೇಲೆ 52 ಕುಟುಂಬ ಗುಡಿಸಲು ನಿರ್ಮಿಸಿಕೊಂಡಿರುವ ಹಿನ್ನೆಲೆ ಯಲ್ಲಿ ಪರ್ಯಾಯ ಜಾಗದ ಬಗ್ಗೆಯೂ ಸಮೀಕ್ಷೆ ನಡೆಸುವಂತೆ ಹಾಗೂ ವಸತಿ ಸಮುಚ್ಚಯ ನಿರ್ಮಾಣ ಮಾಡಲು ಸಮಯ ಬೇಕಾದ ಕಾರಣ ಬೇರೆ ಕಡೆ ತಾತ್ಕಾಲಿಕವಾಗಿ ಶಿಫ್ಟ್ ಮಾಡುವ ಬಗ್ಗೆಯೂ ಪರಿಶೀಲಿಸಿ ಹದಿನೈದು ದಿನಗಳಲ್ಲಿ ವರದಿ ನೀಡುವಂತೆ ಸೂಚನೆ ನೀಡಿದರು.
ಹತ್ತಾರು ವರ್ಷಗಳಿಂದ ಇದೇ ಸ್ಥಳದಲ್ಲಿ ವಾಸಿಸುತ್ತಿದ್ದು ಶಾಶ್ವತ ಸೂರು ಕಲ್ಪಿಸಬೇಕು ಎಂದು ಸ್ಥಳೀಯರು ಸಚಿವರಲ್ಲಿ ಮನವಿ ಮಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


