ತುಮಕೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ಕೆಎಸ್ ಆರ್ ಟಿಸಿ (KSRTC) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಸಾಮಾನ್ಯ ರೈತರ ಮಕ್ಕಳು ಮೇಲೆ ಬರುವುದು ಕಷ್ಟ ಎಂಬ ಬೇಸರ ಹೊರಹಾಕಿದ್ದಾರೆ:
“ಜನ ನನಗೆ ಸಚಿವ ಸ್ಥಾನ ನೀಡಬೇಕೆಂದು ಬಯಸಿದ್ದರು. ಆದರೆ ಯಾರು ನಿರ್ಧಾರ ತೆಗೆದುಕೊಳ್ಳಬೇಕಿತ್ತೋ ಅವರು ಗಮನಿಸಲಿಲ್ಲ. ನಮಗೆ ಗಾಡ್ ಫಾದರ್ ಇಲ್ಲದ ಕಾರಣ ಸಚಿವ ಸ್ಥಾನ ತಪ್ಪಿದೆ.”
“ಯಾರದಾದರೂ ತಲೆ ಹೊಡೆದು ಹಣ ಸಂಪಾದನೆ ಮಾಡಿದವರು ಮಾತ್ರ ಮೇಲಕ್ಕೆ ಬರುತ್ತಾರೆ. ಜಗಳ ಮಾಡಿ ಪಡೆಯಲು ಇದೇನು ನಮ್ಮ ಅಪ್ಪನ ಆಸ್ತಿಯಲ್ಲ. ನಮಗೆ ಯೋಗ್ಯತೆ ಇಲ್ಲ ಎಂದು ಭಾವಿಸಬೇಕಷ್ಟೇ.”
ರಾಜೀನಾಮೆ ನಿರ್ಧಾರ: ಕೆಎಸ್ ಆರ್ ಟಿಸಿ ಸಂಸ್ಥೆ ನಷ್ಟದಲ್ಲಿದ್ದು, ಅಲ್ಲಿ ಸಾಧನೆ ಮಾಡಲು ಅವಕಾಶವಿಲ್ಲದ ಕಾರಣ ಬುಧವಾರ (ನಾಳೆ) ಅಧಿಕೃತವಾಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ಪ್ರಾಮಾಣಿಕತೆಗೆ ಬೆಲೆ ಎಲ್ಲಿದೆ ಎಂಬ ಪ್ರಶ್ನೆ ಕಾಡುತ್ತಿದ್ದು, ರಾಜಕೀಯವೆಂಬುದು ಮೋಸ ಹಾಗೂ ‘ಡಬಲ್ ಗೇಮ್’ನಿಂದ ಕೂಡಿದೆ ಎಂದು ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
