ಬೀದರ್: 2025–26 ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಳಿರಾಮ್ ಕುಶಾಲರಾವ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿದ್ಯಾರ್ಥಿ ವೇತನ ಯೋಜನೆಗಳಾದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ (1ರಿಂದ 8ನೇ ತರಗತಿ), ಶುಲ್ಕ ಮರುಪಾವತಿ ಯೋಜನೆ, ಐಐಟಿ, ಐಐಎಂ ಇತ್ಯಾದಿ ಉತ್ತೇಜನ ಯೋಜನೆ, ಎಂಫಿಲ್ ಮತ್ತು ಪಿ.ಹೆಚ್.ಡಿ ಫೆಲೋಶಿಪ್ ಯೋಜನೆ, ಬಿಎಸ್ಸಿ ನರ್ಸಿಂಗ್ ಮತ್ತು ಜಿಎನ್‌ಎಂ ನರ್ಸಿಂಗ್ ಉತ್ತೇಜನ ಯೋಜನೆ ಹಾಗೂ ವಿದೇಶಿ ವಿದ್ಯಾರ್ಥಿವೇತನ ಯೋಜನೆಗಳಡಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಹರಿಂದ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಅರ್ಹರು SSP (https://ssp.karnataka.gov.in ) ಹಾಗೂ ಸೇವಾ ಸಿಂಧು ಪೋರ್ಟಲ್ (https://sevasindhuservices.karnataka.gov.in ) ಮೂಲಕ ಆ.30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 89513 91061 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW