ಬೆಂಗಳೂರು: ಕುಡಿದ ಮತ್ತಿನಲ್ಲಿ ಇಬ್ಬರು ಯುವಕರು ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿರುವ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಬಿಎಂಟಿಸಿ ಬಸ್ ಯಲಹಂಕದಿಂದ ಶಿವಾಜಿನಗರಕ್ಕೆ ಬರುವ ಮಾರ್ಗಮಧ್ಯೆ ನಿನ್ನೆ ಮಧ್ಯಾನಹ್ನ 4 ಗಂಟೆ ಸಂದರ್ಭದಲ್ಲಿ ಟ್ಯಾನರಿ ರಸ್ತೆಯ ಕೆನರಾ ಬ್ಯಾಂಕ್ ಬಸ್ ಸ್ಟಾಪ್ ನಲ್ಲಿ ನಿಂತಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಏಕಾಏಕಿ ಬಸ್ ನೊಳಗೆ ನುಗ್ಗಿ ಚಾಲಕ ಹಾಗೂ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ್ದಾರೆ.
ಕಿಡಿಗೇಡಿಗಳು ಮದ್ಯದ ನಶೆಯಲ್ಲಿ ಅವಾಚ್ಯ ಶಬ್ದದಿಂದ ನಿಂದಿಸಿ ಅಮಾನುಷವಾಗಿ ವರ್ತಿಸಿದ್ದಾರೆ. ಮೊದಲು ಚಾಲಕ ಗಗನ್ ಮೇಲೆ ಹಲ್ಲೆ ಮಾಡಿ ನಂತರ ಬಿಡಿಸಲು ಬಂದ ನಿರ್ವಾಹಕನ ಶಿವಕುಮಾರ್ ಮೇಲೆ ಏರಗಿ ಬಸ್ ನಿಂದ ಕೆಳಗೆ ಎಳೆದು ತಂದು ನಂತರ ಮುಖಕ್ಕೆ ಗುದ್ದಿ, ಸೊಂಟಕ್ಕೆ ಹೊಡೆದು ಥಳಿಸಿದ್ದಾರೆ. ಪ್ರಯಾಣಿಕರು ರಕ್ಷಣೆ ಮುಂದಾದಾಗ ಕಿಡಿಗೇಡಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.
ಈ ಸಂಬಂಧ ಚಾಲಕ ಗಗನ್ ನೀಡಿರುವ ದೂರಿನ ಮೇರೆಗೆ ಡಿ.ಜೆ. ಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q