ಬೆಂಗಳೂರು: ಬೆಂಗಳೂರಲ್ಲಿ ಒಂದೇ ದಿನ 3 ವಂದೇ ಭಾರತ್ ರೈಲುಗಳ ಮೇಲೆ ಕಲ್ಲತೂರಾಟ ನಡೆಸಿ, ಕಿಡಿಗೇಡಿಗಳು ರೈಲುಗಳ ಕಿಟಕಿ ಗಾಜುಗಳನ್ನು ಒಡೆದಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ಒಂದೇ ದಿನದಲ್ಲಿ 3 ಘಟನೆಗಳು ನಡೆದಿವೆ ಎಂದು ತಿಳಿಸಿದ್ದಾರೆ.
ನಮ್ಮ ಪೊಲೀಸರು ವಿವಿಧ ಸ್ಥಳಗಳಿಗೆ ಧಾವಿಸಿದ್ದಾರೆ ಮತ್ತು ತನಿಖೆ ನಡೆಸುತ್ತಿದ್ದಾರೆ. ಈವರೆಗೆ ಯಾವುದೇ ಬಂಧನವಾಗಿಲ್ಲ ಎಂದು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಸೆಕ್ಷನ್ 147 (ರೈಲ್ವೆ ಹಳಿಯಲ್ಲಿ ಅತಿಕ್ರಮಣ) ಮತ್ತು ಸೆಕ್ಷನ್ 153 (ಉದ್ದೇಶಪೂರ್ವಕ ಕ್ರಿಯೆ ಅಥವಾ ಲೋಪದಿಂದ ರೈಲ್ವೆಯಲ್ಲಿ ಪ್ರಯಾಣಿಸುವ ವ್ಯಕ್ತಿಗಳ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


