ಸರಗೂರು: ಅಡಹಳ್ಳಿ ಗ್ರಾಮದಲ್ಲಿ ದನದ ಕೊಟ್ಟಿಗೆ ಮನೆಗೆ ಗುರುವಾರದಂದು ರಾತ್ರಿ ವೇಳೆಯಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಎರಡು ಕರುಗಳು ಹಾಗೂ ಅಪಾರ ಪ್ರಮಾಣದ ಬೆಳೆ ಮತ್ತು ಕೃಷಿ ಸಾಮಗ್ರಿಗಳು ಸುಟ್ಟು ಕರಕಲಾಗಿದೆ.
ತಾಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡಹಳ್ಳಿ ಗ್ರಾಮದ ದೇವೇಗೌಡ ರವರ ಮಗನಾದ ದೇವಶ್ ಅವರಿಗೆ ಸೇರಿದ ದನದ ಕೊಟ್ಟಿಗೆಗೆ ಗುರುವಾರ ರಾತ್ರಿ 11 :30 ಗಂಟೆಯಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಪರಿಣಾಮವಾಗಿ 2 ಕರು ಮೃತಪಟ್ಟಿವೆ. ಮನೆಗೆ ಬೇಕಾದ ವಸ್ತುಗಳು ಹಾಗೂ ಬೆಳೆದ ಬೆಳೆ ನಷ್ಟ ಉಂಟಾಗಿದೆ.
ಕೊಟ್ಟಿಗೆ ಮನೆಯಲ್ಲಿದ್ದ 10 ಮೂಟೆ ಜೋಳ, 15 ಮೂಟೆ ಗೇಲ್, ಹುರುಳಿ, 2 ಚೀಲ ಹೆಸರು, ಅಲಸಂದೆ ಹಾಗೂ ಇನ್ನಿತರ ಕೃಷಿ ಸಾಮಗ್ರಿಗಳು ಸುಟ್ಟು ಅಪಾರ ಪ್ರಮಾಣದ ಹಾನಿಯಾಗಿವೆ. ಇನ್ನೂ ಒಂದು ಹಸು ಜೀವಂತ ಇದೆ ಆದರೆ, ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದೆ, ಈ ಹಿನ್ನೆಲೆಯಲ್ಲಿ ನಷ್ಟ ಪರಿಹಾರ ನೀಡಬೇಕು ಎಂದು ನೊಂದ ರೈತ ಕುಟುಂಬದವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಅಗ್ನಿ ಶಾಮಕ ದಳ ಕರೆ ಮಾಡಿದ ಕೂಡಲೇ ಸ್ಥಳಕ್ಕೆ ಭೇಟಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡಬೇಕಾಯಿತು. ಆದರೆ ಕೊಟ್ಟಿಗೆಯಲ್ಲಿ ಇದ್ದ ಜಾನುವಾರು ಹಾಗೂ ಬೆಳೆ ಮತ್ತು ಕೃಷಿ ಸಾಮಗ್ರಿಗಳು ಬೆಂಕಿಯಲ್ಲಿ ಬೆಂದು ಹೋಗಿದೆ. ಒಂದು ಹಸುವನ್ನು ಜೀವವನ್ನು ಉಳಿಸಲು ಸಾಧ್ಯವಾಯಿತು ಎನ್ನುತ್ತಾರೆ ಅಗ್ನಿ ಶಾಮಕ ದಳದ ಅಧಿಕಾರಿಗಳು. ಘಟನೆ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ಐ ಕಿರಣ್ ತಿಳಿಸಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC



