nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026
    Facebook Twitter Instagram
    ಟ್ರೆಂಡಿಂಗ್
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    • ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು
    • ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ
    • ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ
    • ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ
    • ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
    ಪಾವಗಡ July 30, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    By Ganesh TumkuruJuly 30, 2026No Comments2 Mins Read
    ambedkar vasati shale

    ಪಾವಗಡ: ತಾಲೂಕಿನ ಪಳವಳ್ಳಿ ಗ್ರಾಮದ ಬಳಿಯಿರುವ ಡಾ. ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ವರ್ಗಗಳ ವಸತಿ ಶಾಲೆಯಲ್ಲಿ ಮಂಗಳವಾರ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಈ ಪ್ರಕರಣದಲ್ಲಿ ಶಾಲಾ ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಂಭೀರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಪೋಷಕರು ಹಾಗೂ ಸ್ಥಳೀಯ ಮುಖಂಡರು ಆರೋಪಿಸಿದ್ದಾರೆ.

    ಮಂಗಳವಾರ ಬೆಳಿಗ್ಗೆಯೇ ಮಕ್ಕಳು ಶಾಲೆಯಿಂದ ಕಾಣೆಯಾಗಿದ್ದರೂ, ಬೆಳಿಗ್ಗೆ 11 ಗಂಟೆಯವರೆಗೂ ಪೋಷಕರಿಗೆ ಯಾವುದೇ ಮಾಹಿತಿ ನೀಡದೆ ಪ್ರಾಂಶುಪಾಲರು ಉಡಾಫೆ ತೋರಿದ್ದಾರೆ. “ಮಕ್ಕಳು ಶಾಲೆಯ ಕಾಂಪೌಂಡ್ ಗೋಡೆ ಹತ್ತಿ ಹೊರಹೋಗಿದ್ದಾರೆ” ಎಂದು ಪ್ರಾಂಶುಪಾಲರು ಸಮರ್ಥಿಸಿಕೊಂಡಿದ್ದರೂ, ಶಾಲಾ ಆವರಣದಲ್ಲಿ ಗೋಡೆ ಹತ್ತಿ ಹೋಗಲು ಸಾಧ್ಯವೇ ಇಲ್ಲ, ಮಕ್ಕಳು ಮುಖ್ಯ ಗೇಟ್ ನಿಂದಲೇ ಹೊರಗೆ ಹೋಗಿದ್ದಾರೆ ಎಂದು ಪೋಷಕರು ಖಂಡಿಸಿದ್ದಾರೆ.

    ಮಕ್ಕಳು ವಸತಿ ನಿಲಯದಿಂದ ಹೊರಹೋಗಲು ಕಾರಣವೇನು ಎಂಬುದನ್ನು ಪರಿಶೀಲಿಸುವ ಹಾಗೂ ಮಾಹಿತಿ ಪಡೆಯುವ ಕೆಲಸಕ್ಕೆ ಯಾವುದೇ ಅಧಿಕಾರಿಗಳು ಮುಂದಾಗಿಲ್ಲ. ಘಟನಾ ಸ್ಥಳಕ್ಕೆ ಭೇಟಿ ನೀಡಬೇಕಿದ್ದ ತಹಶೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಕ ಅಧಿಕಾರಿಗಳು (ಇಓ) ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಸತಿ ನಿಲಯಕ್ಕೆ ಭೇಟಿ ನೀಡದೆ, ತಮಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ.

    ದೈಹಿಕ ಹಿಂಸೆ ಮತ್ತು ದೌರ್ಜನ್ಯದ ಆರೋಪ:

    ಈ ಪ್ರಕರಣದ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಶಾಲೆಯಲ್ಲಿ ಮಕ್ಕಳಿಗೆ ದೈಹಿಕವಾಗಿ ಹಿಂಸೆ ನೀಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ತಾಲೂಕಿನ ಹಲವು ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದರೂ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿಲ್ಲ. ಮಕ್ಕಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಪೋಷಕರು ಧ್ವನಿ ಎತ್ತಿದರೂ, ಮೌನ ವಹಿಸುವಂತೆ ಅವರಿಗೆ ಬುದ್ಧಿ ಹೇಳಿ ಮತ್ತೆ ವಸತಿ ನಿಲಯಕ್ಕೆ ಕಳುಹಿಸಿದ ಘಟನೆಗಳೂ ನಡೆದಿವೆ.

    ಈ ಶಾಲೆಯಲ್ಲಿ ಮಕ್ಕಳ ನಾಪತ್ತೆ ಪ್ರಕರಣ ಇದೇ ಮೊದಲೇನಲ್ಲ. ಹಿಂದೆ ಕೂಡ ಇಂತಹ ಹಲವಾರು ಘಟನೆಗಳು ನಡೆದಿದ್ದರೂ ಅವು ಹೊರಪ್ರಪಂಚಕ್ಕೆ ತಿಳಿಯದಂತೆ ಮುಚ್ಚಿಹಾಕಲಾಗಿತ್ತು. ಅದೃಷ್ಟವಶಾತ್ ಮಕ್ಕಳಿಗೆ ಯಾವುದೇ ಅಪಾಯವಾಗದೆ ಸುರಕ್ಷಿತವಾಗಿ ಮನೆಗೆ ಮರಳಿದ್ದಾರೆ.

    ಪ್ರತಿಭಟನೆಯ ಎಚ್ಚರಿಕೆ:

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಪಾವಗಡ ತಾಲೂಕು ವಾಲ್ಮೀಕಿ ಜಾಗೃತಿ ವೇದಿಕೆಯ ಅಧ್ಯಕ್ಷ ಲೋಕೇಶ್ ಪಾಳೇಗಾರ ಅವರು, ಈ ಪ್ರಕರಣವನ್ನು ಸರಕಾರ ಹಾಗೂ ಸಂಬಂಧಪಟ್ಟ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ. ಶಾಲೆಯ ಪ್ರಾಂಶುಪಾಲರ ಮೇಲೆ ಈಗಾಗಲೇ ಹಲವು ಆರೋಪಗಳಿದ್ದು, ರಾಜಕೀಯ ಪ್ರಭಾವ ಬಳಸಿ ಎಲ್ಲರನ್ನೂ ಬೆದರಿಸುತ್ತಿದ್ದಾರೆ. ಇಲ್ಲಿನ ಖಾಸಗಿ ಸಿಬ್ಬಂದಿ ವಿದ್ಯಾರ್ಥಿಗಳ ಮೇಲೆ ಹಾಗೂ ಪ್ರಶ್ನೆ ಮಾಡಿದ ಪೋಷಕರ ಮೇಲೆ ದಾಳಿ ಮಾಡಿರುವ ಉದಾಹರಣೆಗಳಿವೆ. ಆದ್ದರಿಂದ ಪ್ರಾಂಶುಪಾಲರು ಹಾಗೂ ದೌರ್ಜನ್ಯವೆಸಗುತ್ತಿರುವ ಖಾಸಗಿ ಸಿಬ್ಬಂದಿಯ ಮೇಲೆ ತಕ್ಷಣವೇ ಶಿಸ್ತುಕ್ರಮ ಜರುಗಿಸಿ, ಪ್ರಾಂಶುಪಾಲರನ್ನು ವರ್ಗಾವಣೆ ಮಾಡಬೇಕು; ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

    ಪರಿಶಿಷ್ಟ ಪಂಗಡದ ಮುಖಂಡರಾದ ಭಾಸ್ಕರ ನಾಯಕ್ ಅವರು ಮಾತನಾಡಿ, ಶೇಕಡಾ 75% ರಷ್ಟು ಬಡ ಪರಿಶಿಷ್ಟ ಪಂಗಡದ ಕುಟುಂಬಗಳ ಮಕ್ಕಳು ವ್ಯಾಸಂಗ ಮಾಡುವ ಈ ವಸತಿ ಶಾಲೆಯಲ್ಲಿ ಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ಖಾಸಗಿ ವ್ಯಕ್ತಿಗಳಿಂದ ಮಕ್ಕಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಪ್ರಾಂಶುಪಾಲರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ದುರಂತ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

    ವರದಿ:  ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026

    ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ನೀರು: ಪಾವಗಡದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

    September 8, 2026

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಮೈಸೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಮೈಸೂರಿನ ಕುವೆಂಪುನಗರದಲ್ಲಿ ನಿರ್ಮಿಸಲಾಗಿರುವ ನೂತನ ಮನೆಯ…

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ

    September 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.