ರಾಯಚೂರು: ನಾಪತ್ತೆಯಾಗಿದ್ದ ವ್ಯಕ್ತಿಯು ಅಸ್ಥಿಪಂಜರವಾಗಿ ಪತ್ತೆಯಾಗಿದ್ದಾರೆ. ಈ ಘಟನೆಯು ತಾಲೂಕಿನ ಕೊರ್ತಕುಂದಾ ಗ್ರಾಮದಲ್ಲಿ ನಡೆದಿದೆ. ರಸೂಲ್ ಸಾಬ್ (45) ಅಸ್ಥಿಪಂಜರವಾಗಿ ಪತ್ತೆಯಾದ ವ್ಯಕ್ತಿಯಾಗಿದ್ದಾರೆ.
ರಸೂಲ್ ಅವರು ಜನವರಿ 4 ರಂದು ನಾಪತ್ತೆಯಾಗಿದ್ದರು. ಈ ಹಿನ್ನೆಲೆ ಅವರ ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದ್ದರೂ ಅವರು ಮಾತ್ರ ಪತ್ತೆಯಾಗಿರಲಿಲ್ಲ. ಸೋಮವಾರ ಗ್ರಾಮದ ಹೊರವಲಯದಲ್ಲಿರುವ ದರ್ಗಾ ಬಳಿ ಅವರ ರುಂಡ ಪತ್ತೆಯಾಗಿದ್ದು, ಇಂದು ದರ್ಗಾದಿಂದ 1 ಕಿ.ಮೀ ದೂರದಲ್ಲಿರುವ ಬೆಟ್ಟದಲ್ಲಿ ಮುಂಡ ಪತ್ತೆಯಾಗಿದೆ. ಮೃತ ದೇಹದ ಮೇಲಿದ್ದ ಬಟ್ಟೆಗಳ ಆಧಾರದ ಮೇಲೆ ರಸೂಲ್ ಅವರು ಎಂದು ಗುರುತಿಸಿ ಪತ್ತೆಮಾಡಲಾಗಿದೆ.
ಸಾಬ್ ಅವರನ್ನು ಯಾರೋ ಕೊಲೆ ಮಾಡಿ ಎಸೆದಿದ್ದಾರೆ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಯಾಪಲದಿನ್ನಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.